Allu Arjun Arrest:(ಡಿ.13) ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ನ ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಒಬ್ಬ ಮಹಿಳೆಯ ನಿಧನಕ್ಕೆ ಕಾರಣವಾದ ಆರೋಪದ ಮೇಲೆ ಅಲ್ಲು ಅರ್ಜುನ್ ಅನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಈ ಹಠಾತ್ ಬೆಳವಣಿಗೆಯಿಂದ ಎರಡು ತೆಲುಗು ರಾಜ್ಯಗಳ ಅಲ್ಲು ಅರ್ಜುನ್ ಅಭಿಮಾನಿಗಳು, ಸಿನಿಮಾ ರಂಗದ ಪ್ರಮುಖರು ಆಘಾತಗೊಂಡಿದ್ದಾರೆ.
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.
ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ.