Drone Prathap:(ಡಿ.13) ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ನಡೆಸಿದ್ದ ಸ್ಫೋಟ ಪ್ರಕರಣದ ಆರೋಪದಡಿ ಇದೀಗ ಬಿಗ್ಬಾಸ್ ಖ್ಯಾತಿಯ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಪುತ್ತೂರು: ಸರ್ಕಾರಿ ಆಸ್ಪತ್ರೆಯ ವೈದ್ಯೆಯ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್
ಸೈನ್ಸ್ ವಿಡಿಯೋ ಹೆಸರಿನಲ್ಲಿ ಡ್ರೋನ್ ಪ್ರತಾಪ್ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದು, ಈ ಮೂಲಕ ಮತ್ತೆ ಎಡವಟ್ಟು ಮಾಡಿಕೊಂಡಿದ್ದರು. ಅದ್ರಲ್ಲಿ ನಿರ್ಜನ ಪ್ರದರ್ಶನದ ಕೃಷಿ ಹೊಂಡವೊಂದರಲ್ಲಿ ಪ್ರತಾಪ್ ಸೋಡಿಯಂ ಮೆಟಲ್ ಬಳಸಿಕೊಂಡು, ಅದು ನೀರಿಗೆ ಬೆರೆತಾಗ ಹೇಗೆ ಸ್ಫೋಟವಾಗುತ್ತೆ ನೋಡಿ ಎಂದು ಎಕ್ಸ್ಪರಿಮೆಂಟ್ ಮಾಡಿದ್ದಾನೆ.
ಅಲ್ಲದೆ ನೀರಿಗೆ ಸೋಡಿಯಂ ಮೆಟಲ್ ಹಾಕುತ್ತಿದ್ದಂತೆ ಅದು ತಕ್ಷಣ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿದ್ದಲ್ಲದೇ, ಶಬ್ಧ ಕೂಡ ದೊಡ್ಡ ಪ್ರಮಾಣದಲ್ಲೇ ಕೇಳಿಸಿತ್ತು. ಇದು ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಾಪ್ ಹುಚ್ಚಾಟಕ್ಕೆ ಕಿಡಿಕಾರಿದ್ದರು.
ಅಷ್ಟೇ ಅಲ್ಲದೆ ಘಟನೆ ಸಂಬಂಧ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ ರನ್ನು ಬಂಧಿಸಿದ್ದಾರೆ. ಪ್ರತಾಪ್ ಸೈನ್ಸ್ ಹೆಸರಲ್ಲಿ ಇದೆಂಥಾ ಹುಚ್ಚಾಟ ಮಾಡುತ್ತಿದ್ದಾನೆ ಎಂದು ಕೆಲ ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.