ಮಾಲಾಡಿ:(ಡಿ.13) ಮಾಲಾಡಿಯಲ್ಲಿ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪುಂಜಾಲಕಟ್ಟೆ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಉಜಿರೆ : ರೋಟರಿ ಕ್ಲಬ್ ವತಿಯಿಂದ “ವಿಶ್ವ ಮಣ್ಣಿನ ದಿನ ಆಚರಣೆ”
ಬಂಧಿತ ಆರೋಪಿಗಳು ಬಾಗಲಕೋಟೆ ಜಿಲ್ಲೆಯವರಾದ ಕನಕಪ್ಪ ಯಮನಪ್ಪ ಕ್ಯಾದಗೇರಿ(24) ಹಾಗೂ ರಮೇಶ್ ಚೌಹಾಣ್ (26) ಎಂಬವರಾಗಿದ್ದಾರೆ.
ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿ ಟೆರೆನ್ಸ್ ಜೋಶಲ್ ವೇಗಸ್ ಎಂಬವರಿಗೆ ಸೇರಿದ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನವನ್ನು ಡಿ.2ರಂದು ರಾತ್ರಿ ಕಳ್ಳತನ ಮಾಡಲಾಗಿತ್ತು.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದರು.
ಇದೀಗ ಇಬ್ಬರು ಆರೋಪಿಗಳನ್ನು ಬಾಗಲಕೋಟೆಯಲ್ಲಿ ಬಂಧಿಸಿರುವ ಪೊಲೀಸರು ಮೂರು ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.