Mangaluru:(ಡಿ.13) ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರನ್ನು ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರಾ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Viral News: ಸೆ#ಕ್ಸ್ ಮಾಡಲಿಲ್ಲ, ಆದ್ರೂ ಮಹಿಳಾ ಖೈದಿಯನ್ನು ಗರ್ಭಿಣಿ ಮಾಡಿದ ಖೈದಿ!!?
ನಾಲ್ಕು ದಿನಗಳ ಹಿಂದೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿ ಮಲಗಿದ್ದ ತಾಯಿ ಮತ್ತು ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡಿದ್ದರು.
ಇದರಿಂದ ಮನೆಯೊಡತಿ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝಾ ಗಂಭೀರ ಗಾಯಗೊಂಡಿದ್ದರು. ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮನೆಯೊಡತಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.