ಬೆಂಗಳೂರು:(ಡಿ.15) ಪತ್ನಿ, ಮಾವನ ಕಾಟಕ್ಕೆ ಬೇಸತ್ತ ಕಾನ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಯ್ಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ಪಿಸಿ ತಿಪ್ಪಣ್ಣ ಸೂಸೈಡ್ ಮಾಡಿಕೊಂಡಿದ್ದಾರೆ.



ಇದನ್ನೂ ಓದಿ: Udupi: ಪೇಜಾವರ ಶ್ರೀ ಗಳಿಗೆ ಅವಾಚ್ಯ ಪದಗಳಿಂದ ನಿಂದನೆ, ಜೀವ ಬೆದರಿಕೆ
ಬಿಜಾಪುರ ಜಿಲ್ಲೆ ಸಿಂದಗಿ ತಾಲೂಕಿನ ಹಂದಿಗನೂರು ಗ್ರಾಮದ ತಿಪ್ಪಣ್ಣ, ಹುಳಿಮಾವು ಪೋಲಿಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಾಗನಾತಪುರದ ಕೃಷ್ಣಪ್ಪ ಲೇಔಟ್ನಲ್ಲಿ ವಾಸವಿದ್ದರು. ಹೆಂಡತಿ, ಮಾವ ಕಿರುಕುಳ ನೀಡುತ್ತಿದ್ದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್ ನಲ್ಲಿ ಏನಿದೆ..?
ಪತ್ನಿ, ಮಾವ ವಿರುದ್ಧ ಡೆತ್ ನೋಟ್ ಬರೆದು ತಿಪ್ಪಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕರೆ ಮಾಡಿದಾಗ, ‘ನೀನು ಸತ್ತು ಹೋಗು, ನನ್ನ ಮಗಳು ಚೆನ್ನಾಗಿ ಇರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಮಾವ ನಿಂದಿಸಿದ್ದಾರೆ ಎಂದು ಡೆತ್ ನೋಟ್‌ನಲ್ಲಿ ತಿಪ್ಪಣ್ಣ ಉಲ್ಲೇಖಿಸಿದ್ದಾರೆ.

