Sun. Dec 29th, 2024

Raichur: ಕಾಮಂಧ ಮಾವನಿಂದ ಸೊಸೆಯ ಬರ್ಬರ ಹತ್ಯೆ

ರಾಯಚೂರು:(ಡಿ.15) ಸೊಸೆಯ ಮೇಲಿನ ಆಸೆಯಿಂದ ಮಾವ ಆಕೆಯನ್ನು ಮಂಚಕ್ಕೆ ಕರೆದು ಬಲತ್ಕಾರ ಮಾಡಲು ಪ್ರಯತ್ನ ಮಾಡಿದ್ದು, ಇದಕ್ಕೆ ಸೊಸೆ ಒಲ್ಲೆ ಎಂದಳೆಂದು ಆಕೆಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ ಜುಲಮಗೇರಾ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಮಂಗಳೂರು: ಜೀಪ್ ಚಾಲಕನ ಧಾವಂತಕ್ಕೆ ಸ್ಕೂಟರ್ ಸವಾರ ಬಲಿ!!

ಮೃತ ಮಹಿಳೆಯನ್ನು ದುಳ್ಳಮ್ಮ (27) ಎಂದು ಗುರುತಿಸಲಾಗಿದೆ. ಇದಕ್ಕೂ ಮುಂದೆ 2-3 ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ.

ಗ್ರಾಮದ ಹಿರಿಯರು, ಕುಟುಂಬಸ್ಥರು ಆರೋಪಿ ರಾಮಲಿಂಗಯ್ಯಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಈ ಬಾರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸೊಸೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದ.

ಈ ವೇಳೆ ಸೊಸೆ ನಿರಾಕರಿಸಿದ್ದು, ಸಲಾಕೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಗ್ರಾಮದಿಂದ ಪರಾರಿಯಾಗಿದ್ದಾನೆ.

ಸದ್ಯ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *