ಬೆಳಗಾವಿ: (ಡಿ.16) ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಆಯುಕ್ತರ ಅಧ್ಯಕ್ಷತೆ ಸಮಿತಿ ವರದಿ ನೀಡಿದ ತಕ್ಷಣ ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇವಾ ವಿಷಯಗಳ ಬೇಡಿಕೆ ಈಡೇರಿಕೆಗೆ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬಿಜೆಪಿಯ ಎನ್. ರವಿಕುಮಾರ್, ಡಿ.ಎಸ್. ಅರುಣ್, ಚಿದಾನಂದಗೌಡ, ಧನಂಜಯ ಸರ್ಜಿ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ, ಎನ್ ಎಚ್ ಕೋನರೆಡ್ಡಿ ರವರುಗಳು ಅನೇಕ ವರ್ಷಗಳಿಂದ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ಮಾಡುತ್ತಿರುವ ಬಿಲ್ ಕಲೆಕ್ಟರ್ ಕ್ಲರ್ಕಂ ಡಾಟಾ ಎಂಟ್ರಿ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್, ಪಂಪು ಆಪರೇಟರ್, ಸ್ವಚ್ಛತಾ ಗಾರರು, ಅಟೆಂಡರ್ ಗ್ರಾಮ ಪಂಚಾಯಿತಿ ನೌಕರರನ್ನು ವೇತನ ಭದ್ರತೆ ಹಾಗೂ ಮೇಲ್ದರ್ಜೆಗೇರಿಸಿ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ ವೇತನ ಶ್ರೇಣಿ ನೀಡುವಂತೆ ಅನಿರ್ದಿಷ್ಟಾವಧಿ ಧರಣಿ ನಡೆಸಿದ ಬಗ್ಗೆ ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸ್ಥಳೀಯ ಆಡಳಿತ ಗ್ರಾಮ ಪಂಚಾಯಿತಿನಲ್ಲಿ ನೇಮಕಗೊಂಡ ನೌಕರರಾಗಿದ್ದು ಸರಕಾರಿ ನೌಕರರಾಗಿರುವುದಿಲ್ಲ, ಸರಕಾರದ ಉತ್ತರವನ್ನು ಈಗಾಗಲೇ ನೀಡಲಾಗಿದೆ ಆಡಳಿತಾತ್ಮಕವಾಗಿ ತೊಂದರೆಯಾಗಿದ್ದು ಅಸೋಸಿಯೇಷನ್ ಅವರು ಕಾನೂನಾತ್ಮಕವಾಗಿ ಮಾಡಲು ಅವಕಾಶ ಇದೆ ಎಂದು ಪ್ರಸ್ತಾವನೆ ನೀಡಿರುತ್ತಾರೆ ಬಗ್ಗೆ ಪಂಚಾಯತ್ ರಾಜ್ ವ್ಯವಸ್ಥೆ ಅಡಿ ಕಾನೂನಾತ್ಮಕವಾಗಿ ಪರಿಶೀಲನೆ ಮಾಡಿ ಮಾನ್ಯ ಮುಖ್ಯಮಂತ್ರಿಯವರ ಅಭಿಪ್ರಾಯವನ್ನು ಪಡೆದು ಬಗೆಹರಿಸುವ ಬಗ್ಗೆ ಪ್ರಯತ್ನಪಡುವುದಾಗಿ ತಿಳಿಸಿದರು. ಸಮಿತಿಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರಿಗೆ ಕೇರಳ ಮಾದರಿ ಗೌರವಧನ ನೀಡಲಾಗದು. ಪಂಚಾಯತ್ ಸದಸ್ಯ ರಿಗೆ ಪಿಂಚಣಿ,ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ. ಗ್ರಾಮೀಣ ಅಲ್ಲಿ 942 ಪಂಚಾಯಿತಿಗಳು ಇದ್ದರೆ ರಾಜ್ಯದಲ್ಲಿ 5,950 ಇವೆ. ಎರಡೂ ರಾಜ್ಯಗಳ ಹೋಲಿಕೆ ಸಾಧ್ಯವಿಲ್ಲ ಎಂದು ಹೇಳಿದರು.
50 ಸ್ಥಳೀಯ ಸಂಸ್ಥೆ ಮೇಲ್ದರ್ಜೆಗೆ:
ರಾಜ್ಯದ 50 ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.
ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.
ಪಟ್ಟಣ ಪಂಚಾಯತ್‌ಗೆ ಗೋಕರ್ಣ ಕೇಂದ್ರ:
ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರ ಗೋಕರ್ಣ ಕೇಂದ್ರವಾಗಿಸಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ರಹೀಂಖಾನ್ ವಿಧಾನಸಭೆಯಲ್ಲಿ ತಿಳಿಸಿದರು.
ವಿದ್ಯುತ್ ಬಾಕಿಯ ಬಡ್ಡಿ 1,252 ಕೋಟಿ ಮನ್ನಾ:
ರಾಜ್ಯದ ಗ್ರಾಮ ಪಂಚಾಯಿತಿಗಳು 2015ರಿಂದ ಮಾರ್ಚ್ 2023ರವರೆಗೆ ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಪಾವತಿಸಬೇಕಾಗಿರುವ ಬಾಕಿ ಮೊತ್ತ 6,509,90 , 1,252.20 ಕೋಟಿ ಬಡ್ಡಿಯನ್ನು ಮನ್ನಾ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಕಾಂಗ್ರೆಸ್‌ನ ತಿಮ್ಮಯ್ಯ ಅವರ ಪ್ರಶ್ನೆಗೆ ಅವರು, 391.79 ಕೋಟಿ ಅನುದಾನವನ್ನು ಗ್ರಾಮ ಪಂಚಾಯತಿಗಳ ವಿದ್ಯುತ್ ಶುಲ್ಕದ ಮೊತ್ತ ಭರಿಸಲು ಬಿಡುಗಡೆ ಮಾಡಲಾಗುತ್ತಿದೆ ಎಂದರು.
2024-25ನೇ ಸಾಲಿನಲ್ಲಿ ಗ್ರಾ.ಪಂ ಸದಸ್ಯರ ಗೌರವ ಧನಕ್ಕಾಗಿ 273.78 ಕೋಟಿ ಅನುದಾನ ಒದಗಿಸಲಾಗಿದೆ. ಅನುದಾನ ಹೆಚ್ಚಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಹೇಳಿದರು.
ಗ್ರಾಮ ಪಂಚಾಯತ್ ಆಸ್ತಿಗಳ ಸಮೀಕ್ಷೆ:
ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯೂಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ವಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಲ್ಲಿಯವರೆಗೆ ಮ್ಯಾನ್ಯೂಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿ ಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್ ನಲ್ಲಿ ನಮೂದಿಸಲಾಗಿದೆ ಎಂದರು.