Sat. Dec 28th, 2024

Belthangady: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ :(ಡಿ.18)ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಇವುಗಳ ಸಹಕಾರದಿಂದ ಕ್ಲಸ್ಟರ್ ಮಟ್ಟದ ಸ್ಥಳೀಯ ಸಂಪನ್ಮೂಲ ಕ್ರೋಡೀಕರಣ ಕುರಿತು ತರಬೇತಿ ಕಾರ್ಯಕ್ರಮವು ಬೆಳ್ತಂಗಡಿ ಜ್ಞಾನನಿಲಯದಲ್ಲಿ 17 ಹಾಗೂ 18 ಡಿಸೆಂಬರ್ ರಂದು ನಡೆಯಿತು.

ಇದನ್ನೂ ಓದಿ: ಮಂಗಳೂರು: ಮಾದಕ ವಸ್ತು ಮಾರಾಟ ಆರೋಪ

ಜ್ಞಾನ ನಿಲಯದ ನಿರ್ದೇಶಕರಾದ ವಂದನೀಯ ಫಾ. ಜೋಸೆಫ್ ಮಟ್ಟಮ್ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿದರು. ಬೆಂಗಳೂರು ಕ್ರಾಸ್ ಸಂಸ್ಥೆಯ ರಾಜ್ಯ ಸಂಯೋಜಕಿ ಶ್ರೀಮತಿ ಲೈನಾ ಲಸ್ರಾದೋರವರು ಕಾರ್ಯಕ್ರಮಕ್ಕೆ ಶುಭ ಕೋರಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ.ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. 4 ಸಂಸ್ಥೆಗಳ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಜಿರೆ ರುಡ್ ಸೆಟ್ ನ ಹಿರಿಯ ಉಪನ್ಯಾಸಕರಾದ ಜೇಮ್ಸ್ ಅಬ್ರಹಾಂ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರುಗಳಾದ ಡಾ. ಜಯಕುಮಾರ್ ಶೆಟ್ಟಿ ಹಾಗೂ ಡಾ. ಟಿ. ಕೃಷ್ಣ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಸ್ಥಳೀಯ ಸಂಪನ್ಮೂಲ ಕ್ರೋಡೀಕರಣದ ಬಗ್ಗೆ ತರಬೇತಿ ನೀಡಿದರು.

ಉಡುಪಿ ಸಂಪದ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನಾ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತೆ ಶ್ರೀಮತಿ ಸುಶೀಲ ಕೆ.ಜಿ. ಎಲ್ಲರನ್ನು ಸ್ವಾಗತಿಸಿದರು. ಶ್ರೀ ಮಾರ್ಕ್ ಡಿ ಸೋಜರವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕರ್ತರಾದ ಜೋನ್ಸನ್ ರವರು ವಂದಿಸಿದರು. ಒಟ್ಟು 42 ಮಂದಿ ಭಾಗವಹಿಸಿದರು.

Leave a Reply

Your email address will not be published. Required fields are marked *