ಮಂಗಳೂರು:(ಡಿ.18) ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೋಕೇನ್‌ನ್ನು ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್‌ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ
ನೈಜೀರಿಯಾದ ಮೈಕೆಲ್ ಒಕ್ಸಾರ್ ಒಡಿಪ್ಪೋ (44) ಬಂಧಿತ ಆರೋಪಿ.
2024ನೇ ಮಾರ್ಚ್ ತಿಂಗಳಲ್ಲಿ ಉಳ್ಳಾಲದ ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕೋಕೆನ್ ಮಾರಾಟ ಮಾಡುತ್ತಿದ್ದ ಅಂಬ್ಲಮೊಗರು ನಿವಾಸಿಗಳಾದ ಸದಕತ್ ಶಾನ್ ನವಾಝ್, ಅಶ್ವಕ್ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಇವರು ಗೋವಾದಿಂದ ಕೋಕೆನ್ ಖರೀದಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಬಂಧಿತರ ವಶದಿಂದ 34 ಗ್ರಾಂ ಕೋಕೆನ್ ಹಾಗೂ ಇತರ ಒಟ್ಟು ರೂ. 2,72,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳಿಗೆ ಕೋಕೆನ್ ನೀಡಿದ ಗೋವಾದ ಡ್ರಗ್ ಪೆಡ್ಕರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಉತ್ತರ ಗೋವಾದ ಕಾಲನ್ ಗೂಟ್ ಎಂಬಲ್ಲಿಂದ ವಶಕ್ಕೆ ಪಡೆದಿದ್ದಾರೆ.
ಆತನ ವಶದಿಂದ 30 ಗ್ರಾಂ ಕೋಕೆನ್, ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಗಳು-2, ನಗದು ಹಣ 4500 ರೂ. ಡಿಜಿಟಲ್ ತೂಕ ಮಾಪನ ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 11,25,000 ರೂ. ಆಗಿರುತ್ತದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಸೆನ್ ಕ್ರೈಂ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.