Sun. Dec 29th, 2024

Ujire: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಉಜಿರೆ:(ಡಿ.18) ಉಜಿರೆ ಎಸ್.ಡಿ.ಎಂ ಮಲ್ಟಿಷ್ಪೆಷಾಲಿಟಿ ಆಸ್ಪತ್ರೆಯ 2025ನೇ ಸಾಲಿನ ಕ್ಯಾಲೆಂಡರ್‌ ಅನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಇದನ್ನೂ ಓದಿ: ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

ನಿತ್ಯ ಪಂಚಾಂಗದೊಂದಿಗೆ ಸಂದರ್ಶನ ವೈದ್ಯರ ಲಭ್ಯತೆಯ ವಿವರ, ಆಸ್ಪತ್ರೆಯ ರಜಾ ದಿನಗಳ ವಿವರ, ಆರೋಗ್ಯಕ್ಕೆ ಸಂಬಂಧಿಸಿದ ಸಲಹೆಗಳು, ಮುಖ್ಯ ವಿಷಯಗಳನ್ನು ಬರೆದಿಡಲು ಪ್ರತ್ಯೇಕ ಜಾಗ ಹೊಂದಿರುವ ಕ್ಯಾಲೆಂಡರ್‌ ಇದಾಗಿದೆ.

ಇದರಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವುದರಿಂದ ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಂಪೂರ್ಣ ಮಾಹಿತಿ ಹಾಗೂ ಅಪಾಂಯಿಂಟ್‍ಮೆಂಟ್ ಕೂಡ ಪಡೆಯಲು ಅವಕಾಶ ಇರುತ್ತದೆ.

ಅತ್ಯಾಕರ್ಷಕ ಮತ್ತು ಉಪಯುಕ್ತವಾದ ಕ್ಯಾಲೆಂಡರ್ ಇದಾಗಿದ್ದು, ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.


ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ| ದೇವೆಂದ್ರ ಕುಮಾರ್. ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ನರ್ಸಿಂಗ್ ಅಧೀಕ್ಷಕಿ ಶೆರ್ಲಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *