ಕನ್ಯಾಡಿ:(ಡಿ.19) ಬೈಕ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ನಡೆದಿದೆ.


ಇದನ್ನೂ ಓದಿ: ಮಲ್ಪೆ: ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯ ಮೀಟಿಂಗ್ ರೂಮ್ ಬೆಂಕಿಗಾಹುತಿ
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಬೈಕ್ ಸವಾರ ಉಜಿರೆ ನಿವಾಸಿ ಸುರೇಂದ್ರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

