ಮಂಗಳೂರು:(ಡಿ.19) ಮಂಗಳೂರಿನಲ್ಲಿ ಬ್ಯಾಂಕ್ ಸಾಲದ ಕಿರುಕುಳಕ್ಕೆ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊನನ್ನು ಕಡೆಗೂ ಬಂಧಿಸಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಶಿಶಿಲ ನಿಧನ
ಉಳಾಯಿಬೆಟ್ಟು ಕುಟಿನ್ಹೋ ಪದವು ನಿವಾಸಿ 47 ವರ್ಷದ ಮನೋಹರ್ ಪಿರೇರಾ ತನ್ನ ಸಾವಿಗೆ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಿರುಕುಳವೇ ಕಾರಣವೆಂದು ವಿಡಿಯೋ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತನ್ನ 9 ಲಕ್ಷ ಹಣವನ್ನು ತಿಂದಿದ್ದಾನೆ. ಎರಡು ವರ್ಷಗಳಿಂದ ಕೆಲಸ ಮಾಡಲಾಗದೆ ಕಷ್ಟ ಪಡುತ್ತಿದ್ದೇನೆ, ಮನೆಯನ್ನು ಸೀಜ್ ಮಾಡಿದ್ದಾನೆ, ಇನ್ನೂ ಹಣ ಆಗಬೇಕೆಂದು ಹೇಳುತ್ತಿದ್ದಾನೆ.
ಇದರಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದು, ಚಿಕಿತ್ಸೆ ಪಡೆದು ಬಂದಿದ್ದೇನೆ. ಬದುಕು ನಡೆಸುವುದೇ ಕಷ್ಟವಾಗಿದೆ ಇತ್ಯಾದಿ ವಿಷಯಗಳನ್ನು ತುಳುವಿನಲ್ಲಿ ಹೇಳಿ ವಿಡಿಯೋ ಮಾಡಿದ್ದರು.
ವಿಡಿಯೋವನ್ನು ವಾಟ್ಸಪ್ ಗ್ರೂಪಿನಲ್ಲಿ ಹಾಕಿದ್ದರು.ಘಟನೆಗೆ ಸಂಬಂಧಿಸಿ ಮನೋಹರ್ ಪಿರೇರಾ ಅವರ ತಮ್ಮ ಜೀವನ್ ಪಿರೇರಾ ಕಂಕನಾಡಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಇದೀಗ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊನನ್ನು ಪೋಲಿಸರು ಬಂಧಿಸಿದ್ದಾರೆ.