ಮೇಷ ರಾಶಿ: ಇಂದು ನಿಮ್ಮ ಒರಟು ಮಾತಿನಿಂದ ಸಂಗಾತಿಗೆ ಬೇಸರವಾಗುವುದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ವೃದ್ಧರ ಸೇವೆಯಲ್ಲಿ ತೊಡಗಿಕೊಳ್ಳುವಿರಿ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು. ನಿಮ್ಮ ವ್ಯಾಪಾರದ ತಂತ್ರವು ಫಲಿಸಬಹುದು.
ವೃಷಭ ರಾಶಿ; ನ್ಯಾಯ ನಿರ್ಣಯವನ್ನು ಕೊಡುವ ಸಂದರ್ಭ ಬರಬಹುದು. ಅರಿವಿಗೆ ಬಾರದೇ ಕೆಲವು ತಪ್ಪುಗಳು ನಡೆಯುವುದು. ನಿಮ್ಮ ಅಂತಶ್ಶಕ್ತಿಯೇ ನಿಮ್ಮ ನಿಜವಾದ ಬಲವಾದುದರಿಂದ ಯಾವ ಸಮಸ್ಯೆಗಳಿಗೂ ನಿರಾತಂಕವಾಗಿ ಇರುವಿರಿ. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಬರಬೇಕಾದ ಹಣವು ಆಕಸ್ಮಿಕವಾಗಿ ಬಂದಿದ್ದು ಖುಷಿ ಕೊಡುವುದು.
ಮಿಥುನ ರಾಶಿ: ಬೆಟ್ಟದಷ್ಟು ಕಾರ್ಯಗಳಿದ್ದು ಕಲ್ಲಿನಂತೆ ಬಿದ್ದಿದ್ದರೆ ಯಾರೂ ಏನೂ ಮಾಡಲಾಗದು. ಇರುವ ಚೈತನ್ಯವನ್ನು ಬೆಳೆಸಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳಬಡೆಕು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಪ್ರೀತಿಯ ವಿಷಯದಲ್ಲಿ ಇಂದು ದುಃಖವುಂಟಾಗಬಹುದು.
ಕರ್ಕಾಟಕ ರಾಶಿ: ಇಂದು ಮನೆಯಲ್ಲಿ ಕೊರತೆಗಳಿದ್ದರೂ ಅದನ್ನು ತೋರಿಸದಂತೆ ನಡೆದುಕೊಳ್ಳುವಿರಿ. ಏನೇ ಮಾಡಿದರೂ ಚಾಂಚಲ್ಯವನ್ನು ನಿಯಂತ್ರಿಸಲಾಗದೇ ಕಷ್ಟವಾಗುವುದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ.
ಸಿಂಹ ರಾಶಿ: ಉತ್ತಮ ಹೂಡಿಕೆ ಅವಕಾಶಗಳು ದೊರೆಯಲಿವೆ. ಇಂದು ಅನಿರೀಕ್ಷಿತ ಬಂಧುಗಳ ಆಗಮನದಿಂದ ಯೋಜಿತವಾದ ಕಾರ್ಯಗಳನ್ನು ಬದಲಿಸುವುದು ಬೇಡ. ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ.
ಕನ್ಯಾ ರಾಶಿ: ಇಂದು ಉದ್ಯೋಗ ಬದಲಾವಣೆಗೆ ಒತ್ತಡ ಬರಲಿದೆ. ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗಬಹುದು. ಇಲ್ಲವಾದರೆ ನಿಮಗೇ ತೊಂದರೆ. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ.
ತುಲಾ ರಾಶಿ: ಇಂದು ಕೆಲಸದಲ್ಲಿ ಅಧಿಕಾರಿಗಳೊಂದಿಗೆ ಸಮನ್ವಯವನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ಬಡ್ತಿಗೆ ಅವಕಾಶಗಳು ಬರಬಹುದು. ಆದಾಯ ಹೆಚ್ಚಲಿದೆ. ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಮನಶ್ಚಾಂಚಲ್ಯದಿಂದ ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲಾಗದು. ಪ್ರೀತಿಯು ನಿಮ್ಮ ಯಶಸ್ಸಿನ ವೇಗಕ್ಕೆ ಕಡಿವಾಣ ಹಾಕಬಹುದು.
ವೃಶ್ಚಿಕ ರಾಶಿ: ಕಛೇರಿಯ ಪರಿಸ್ಥಿತಿಯ ಏರಿಳಿತಗಳಿಂದ ಅಸಮಾಧಾನವಾಗಲಿದೆ. ತಾಳ್ಮೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು. ಕೌಟುಂಬಿಕ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ನಿಮ್ಮ ಅಂತರಂಗದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಯೋಚಿಸುವಿರಿ. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ಸಾಮಾಜಿಕ ತಾಣದಲ್ಲಿ ಹೆಚ್ಚು ಸಮಯ ಕಳೆಯುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ.
ಧನು ರಾಶಿ: ಇಂದು ಸ್ನೇಹಿತರ ಸಹಾಯದಿಂದ ವ್ಯಾಪಾರ ಸುಧಾರಿಸಿ ಆರ್ಥಿಕವಾಗಿ ನೀವು ಉತ್ತಮವಾಗಬಲ್ಲಿರಿ. ಅಲ್ಪ ಲಾಭಕ್ಕಾಗಿ ದೇಹವನ್ನು ದಂಡಿಸಬೇಕಾದೀತು. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ. ಚಂಚಲವಾದ ಮನಸ್ಸು ನಿಮ್ಮ ಸಂಗಾತಿಗೆ ಇಷ್ಡವಾಗದು. ಆದಾಯ ಮೂಲದ ರಹಸ್ಯವನ್ನು ಹೇಳಿಕೊಳ್ಳುವುದು ಬೇಡ.
ಮಕರ ರಾಶಿ: ಇಂದು ನಕಾರಾತ್ಮಕ ಆಲೋಚನೆಗಳಿಂದ ದೂರವಿದ್ದರೂ ಅತಿಯಾದ ಉತ್ಸಾಹ ಬೇಡ. ನಿಮಗೆ ಉದ್ಯೋಗದಿಂದ ನಿವೃತ್ತಿಯು ಬೇಕೆನಿಸಬಹುದು. ಮುಖಂಡರಿಗೆ ಪ್ರಶಂಸೆ ಗೌರವಗಳು ಸಿಗಲಿವೆ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಕ್ಕೆ ಕೊಡುವಿರಿ. ಒತ್ತಡವು ಬಂದರೆ ಸ್ವಲ್ಪ ಕಾಲ ಎಲ್ಲವನ್ನೂ ಮರೆತು ಓಡಾಡಿ ಬನ್ನಿ.
ಕುಂಭ ರಾಶಿ: ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ಅಪರಿಚಿತರನ್ನು ನಂಬಬೇಕಾಗಬಹುದು. ಇಂದು ನಿಮಗೆ ಸಣ್ಣ ತಡೆಯೂ ದೊಡ್ಡದಾಗಿ ಕಾಣಿಸುವುದು. ಇಂದು ನಿಮ್ಮ ಯಾವುದಾದರೂ ಕಾರ್ಯಕ್ಕೆ ಸ್ನೇಹಿತರ ಬೆಂಬಲದಿಂದ ಸಾಧ್ಯವಾಗಿಸುವಿರಿ. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ವ್ಯವಹಾರದಲ್ಲಿ ಗೊಂದಲವಿಟ್ಟುಕೊಳ್ಳುವುದು ಬೇಡ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ.
ಮೀನ ರಾಶಿ: ಇಂದು ನೀವು ಶೈಕ್ಷಣಿಕ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಕೆಲಸದಲ್ಲಿ ಅಧಿಕಾರಿಗಳಿಂದ ಬೆಂಬಲ ಪಡೆಯುತ್ತೀರಿ. ಮೇಲ್ನೋಟಕ್ಕೆ ಯಾವುದನ್ನೂ ತೀರ್ಮಾನಿಸುವುದು ಕಷ್ಟವೇ. ಎಲ್ಲವನ್ನೂ ವ್ಯಾವಹಾರಿಕ ದೃಷ್ಟಿ ರಿಂದಲೇ ನೋಡುವುದು ಕಷ್ಟ. ಆಪ್ತರಿಗೆ ಇಷ್ಟವಾದ ಉಡುಗೊರೆಯನ್ನು ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು.