Sat. Dec 28th, 2024

Bengaluru: ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ಕರಾಳ ದಂಧೆ ಬೆಳಕಿಗೆ..! – ಆರೋಪಿಗಳ ಫೋನ್​ನಲ್ಲಿ ಪತ್ತೆಯಾಯ್ತು ಯುವತಿಯರ ಬೆ#ತ್ತಲೆ ಫೋಟೋ!! – ಏನಿದು ಸ್ವಿಂಗರ್ಸ್ ವಾಟ್ಸಪ್ ಗ್ರೂಪ್?!!!

ಬೆಂಗಳೂರು(ಡಿ.21): ಹೊಸ ವರ್ಷ ಅಂದ ಕೂಡಲೇ ಪಾರ್ಟಿ, ಸೆಲೆಬ್ರೇಷನ್ ಇದ್ದೇ ಇರುತ್ತೆ. ಅದರಲ್ಲೂ ಇಂದಿನ ಯುವಕರ ಕಾರುಬಾರು, ಮೋಜು ಮಸ್ತಿ ಕೇಳಬೇಕಾ? ಅವರದ್ದು ಬೇರೆಯದ್ದೇ ಲೆವಲ್ ಇರುತ್ತೆ. ಈ ಹೊಸ ವರ್ಷಕ್ಕೆ ಅಂತಾನೆ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ಅಚ್ಚರಿ ಅನ್ನಿಸಿದರೂ ಸತ್ಯ.

ಇದನ್ನೂ ಓದಿ: kidiyoor: ಅವನತಿ ಅಂಚಿನಲ್ಲಿರುವ ಬಿಳಿಗೂಬೆಯನ್ನು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ ನಿತ್ಯಾನಂದ‌ ಒಳಕಾಡು

‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಳಕಿಗೆ ಬಂದಿದೆ. ಈ ಸಂಬಂಧ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಪತ್ತೆಯಾಗಿದೆ.

ಯುವಕನೋರ್ವ ಪರಿಚಯಸ್ಥ ಯುವತಿಯನ್ನು ಪಾರ್ಟಿಗೆ ಎಂದು ಕರೆದು ಬಳಿಕ ಸ್ನೇಹಿತನ ಜೊತೆಗೆ ಸಹಕರಿಸುವಂತೆ ಬಲವಂತ ಮಾಡಿದ್ದಾನೆ. ಇದಕ್ಕೆ ಒಪ್ಪದಿದ್ದಕ್ಕೆ ಸ್ನೇಹಿತರ ಜೊತೆಗೆ ಸೇರಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇನ್ನೂ ನೊಂದ ಯುವತಿ ಘಟನೆ ಸಂಬಂಧ ಸಿಸಿಬಿಗೆ ದೂರು ನೀಡಿದ್ದು, ಕೂಡಲೇ ಅಲರ್ಟ್ ಆದ ಪೊಲೀಸರು ಕರಾಳ ದಂಧೆ ನಡೆಸುತ್ತಿದ್ದ ಕಾಮುಕರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಹರೀಶ್,ಹೇಮಂತ್ ಎಂದು ಗುರುತಿಸಲಾಗಿದೆ.

ಹರೀಶ್ ಎಂಬಾತ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಅಲ್ಲದೇ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ. ಜೋಡಿ ಹಕ್ಕಿಯಂತೆ ಎಲ್ಲಾ ಕಡೆ ಸುತ್ತಾಡಿದ್ದಾರೆ. ಬರುಬರುತ್ತಾ ಹರೀಶ್ ತನ್ನ ತನ್ನ ಅಸಲು ಮುಖ ತೋರಿಸಿದ್ದಾನೆ.

ಸ್ವಿಂಗರ್ಸ್ ವಾಟ್ಸಪ್ ಗ್ರೂಪ್:
ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದ ‘ಸ್ವಿಂಗರ್ಸ್’ ಟೀಂ, ಬೆಂಗಳೂರು ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಗೆ ಕಪಲ್ಸ್ ಜೊತೆಗೆ ಆಸಾಮಿಗಳು ತಮ್ಮ ಪ್ರಿಯತಮೆಯರನ್ನು ಪರಸ್ಪರ ಎಕ್ಸ್ ಚೇಂಜ್ ಮಾಡಿಕೊಳ್ಳುತ್ತಿದ್ದರು ಅಷ್ಟೇ ಅಲ್ಲ ಒಬ್ಬನ ಗರ್ಲ್ ಫ್ರೆಂಡ್ ಜೊತೆಗೆ ಮತ್ತೊಬ್ಬ ಬೆಡ್ ಶೇರ್ ಮಾಡುತ್ತಿದ್ದ. ಇದೇ ರೀತಿ ಯುವತಿಯನ್ನು ಹರೀಶ್ ಎಂಬಾತ ಕೂಪಕ್ಕೆ ದೂಡಿದ್ದ. ಒಪ್ಪದಿದ್ದಾಗ ಸ್ನೇಹಿತರ ಜೊತೆಗೆ ಸೇರಿ ಅತ್ಯಾಚಾರ ಮಾಡಿದ್ದಾನೆ.

ಆರೋಪಿಗಳ ಫೋನ್​ನಲ್ಲಿ ವಿಡಿಯೋಗಳು ಪತ್ತೆ:
ಘಟನೆಯಿಂದ ಬೇಸತ್ತ ಯುವತಿ ಸಿಸಿಬಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಸಿಸಿಬಿ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಮೊಬೈಲ್‌ ಪರಿಶೀಲನೆ ವೇಳೆ ಭಯಾನಕ‌ ಸತ್ಯ ಬಯಲಾಗಿದೆ. ಮೊಬೈಲ್ ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೊ ಪತ್ತೆಯಾಗಿವೆ. ಇನ್ನು ಏಕಾಂತದಲ್ಲಿದ್ದ ವಿಡಿಯೋಗಳನ್ನು ಸಹ ಆರೋಪಿಗಳು ರೆಕಾರ್ಡ್​ ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಅದೇ ವೀಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

Leave a Reply

Your email address will not be published. Required fields are marked *