C.T. Ravi:(ಡಿ.21) ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಉಪಯೋಗಿಸಿದ್ದಾರೆ ಎಂಬ ಕಾರಣಕ್ಕಾಗಿ ಶಾಸಕ ಸಿಟಿ ರವಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಕೋರ್ಟ್ ಆದೇಶದ ಮೇಲೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆದರೆ ಈ ಬಳಿಕ ರಾಜ್ಯದಲ್ಲಿ ಕೆಲವು ಅಚ್ಚರಿಯ ಬೆಳವಣಿಗೆಗಳಾಗಿವೆ.
ಇದನ್ನೂ ಓದಿ: ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳಿಂದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ.!!
ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಉಪಯೋಗಿಸಿ ನಿಂದನೆ ಮಾಡಿದ್ದಾರೆ ಎಂಬುದು ತಿಳಿಯುತ್ತಿದ್ದಂತೆ ಸಚಿವೆ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸುವರ್ಣಸೌಧದ ಒಳ ನುಗ್ಗಿ ಸಿಟಿ ರವಿ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿದ ಪ್ರಕರಣದಲ್ಲಿ 24 ಜನರನ್ನು ಆ ಕ್ಷಣದಲ್ಲೇ ಬಂಧಿಸಲಾಗಿತ್ತು. ಅನಂತರ ಅವರನ್ನು ರಿಲೀಸ್ ಮಾಡಲಾಗಿತ್ತು.
ಆದರೆ ಅಚ್ಚರಿಯೇನೆಂದರೆ ಸಿ.ಟಿ. ರವಿ ಅವರನ್ನು ಬಂಧಿಸಿದ ಕಾರಣ ಅದನ್ನು ವಿರೋಧಿಸಿ ಈ ಬಂಧನ ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಇದೀಗ ಈ ರೀತಿ ಪ್ರತಿಭಟಿಸಿದಂತಹ ಸುಮಾರು ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಮೇಲೆ ಇದೀಗ FIR ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಸೇರಿ ಹಲವರ ವಿರುದ್ಧ ಬಸವನಹಳ್ಳಿ ಠಾಣೆಯಲ್ಲಿ ಐದು, ನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಕೇಸ್ ದಾಖಲಾಗಿವೆ.
ಅನುಮತಿ ಇಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ್ದು, ಬೈಕ್, ಟೈರ್ ಸುಟ್ಟಿದ್ದು, ಹೆದ್ದಾರಿ ತಡೆ, ಸಾರ್ವಜನಿಕರ ಶಾಂತಿಗೆ ಭಂಗ ಮತ್ತು ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟ ಆರೋಪದಡಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.