ಪಾಣೆಮಂಗಳೂರು:(ಡಿ.21) ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನ ಇಂದು ಬೆಳಿಗ್ಗೆ ನಡೆದಿದೆ.
ಇದನ್ನೂ ಓದಿ: ಬಂಟ್ವಾಳ: ಸಜೀಪ ಮೂಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಟಾಟಾ ಕಂಪೆನಿಯ ಏಸ್ ಗೂಡ್ಸ್ ಟೆಂಪೋವೊಂದು ಚಾಲಕನ ನಿರ್ಲಕ್ಷ್ಯ ತನದಿಂದ ಸೇತುವೆಯಲ್ಲಿ ತಲೆ ಮೇಲೆಯಾಗಿ ನಿಂತುಕೊಂಡಿದೆ.
ಬಿಸಿರೋಡಿನಿಂದ ಗೂಡಿನಬಳಿಯಾಗಿ ಪಾಣೆಮಂಗಳೂರು ಕಡೆಗೆ ಸಂಚಾರಕ್ಕೆ ಯತ್ನಿಸಿದಾಗ ಅದು ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ಹಾಕಲಾದ ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿಕೊಂಡಿದೆ. ಶಂಭೂರು ಕಡೆಯ ವಾಹನ ಇದಾಗಿದ್ದು,ಮಸಾಲೆ ಪೌಡರ್ ಮಾರ್ಕೆಟಿಂಗ್ ಗೂಡ್ಸ್ ಇದಾಗಿದೆ.
ಘಟನೆಯಿಂದ ಚಾಲಕ ಯಾವುದೇ ಗಾಯವಿಲ್ಲದೆ ಅಪಾಯವಿಲ್ಲದೆ ಪಾರಾಗಿದ್ದಾನೆ.
ಘಟನೆಯಿಂದ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನಾನುಕೂಲವಾಗಿದೆ . ಸಿಲುಕಿಕೊಂಡ ವಾಹನವನ್ನು ಹೊರಗೆತೆಗೆಯಲು ಹರಸಾಹಸ ಪಡುತ್ತಿದ್ದಾರೆ.
ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಸೇತುವೆಯ ಆಯುಷ್ಯ ಮುಗಿದಿದ್ದು, ಯಾವುದೇ ಘನ ವಾಹನಗಳ ಸಂಚಾರ ಮಾಡುವುದು ನಿಷಿದ್ಧ ಎಂದು ಸುಮಾರು ವರ್ಷಗಳ ಹಿಂದೆಯೇ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದರೂ ಕೂಡ ಸ್ಥಳೀಯಾಡಳಿತದ ನಿರ್ಲಕ್ಷ್ಯತನಕ್ಕೆ ಒಳಗಾಗಿ ಕಳೆದ ವರ್ಷದವರೆಗೂ ಸೇತುವೆಯಲ್ಲಿ ಘನ ವಾಹನಗಳು ಬೇಕಾಬಿಟ್ಟಿ ಯಾಗಿ ಸಂಚಾರ ಮಾಡುತ್ತಿದ್ದವು.
ಆದರೆ ಕಳೆದ ಮಳೆಗಾಲದಲ್ಲಿ ಸೇತುವೆಯ ಮೇಲೆ ಬಿರುಕು ಕಂಡಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಸ್ಥಳೀಯಾಡಳಿತ ಕೂಡಲೇ ಸೇತುವೆಯ ಮೇಲೆ ಸಂಚಾರ ಮಾಡದಂತೆ ತಡೆಬೇಲಿ ನಿರ್ಮಾಣ ಮಾಡಿದೆ.
ಆದರೆ ಒಂದು ಬಾರಿ ಅ ತಡೆಬೇಲಿಯನ್ನು ಅಕ್ರಮ ಮರಳು ಸಾಗಾಟ ಮಾಡುವ ಲಾರಿಗಳು ಹೊತ್ತು ಕೊಂಡು ಹೋಗಿದ್ದವು.ಮತ್ತೆ ಘನ ಗಾತ್ರದ ಕಬ್ಬಿಣದ ತಡೆಬೇಲಿ ಹಾಕಲಾಗಿತ್ತು .ಈದಿನ ಅ ಬೇಲಿಯನ್ನು ಕಿತ್ತುಕೊಂಡು ಹೋಗುವ ಪ್ರಯತ್ನ ವಾಹನಗಳಿಂದ ಆಗಿದೆ ಎಂಬುದೇ ವಿಪರ್ಯಾಸ.