Sat. Dec 28th, 2024

Thotattadi: ನೇಣು ಬಿಗಿದುಕೊಂಡು ತೋಟತ್ತಾಡಿ ಗ್ರಾಮದ ನಿವಾಸಿ ಬಾಬುಗೌಡ ಆತ್ಮಹತ್ಯೆ

ಬೆಳ್ತಂಗಡಿ:(ಡಿ.21) ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ ಎಂಬವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ‌ ಸಂಭವಿಸಿದೆ.

ಇದನ್ನೂ ಓದಿ: ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ


ಡಿ.18 ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು,

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇವರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು ಎನ್ನಲಾಗಿದ್ದು, ಬ್ಯಾಂಕ್ ಗಳಿಂದ‌ಪಡೆದ ಸಾಲಗಳನ್ನು ಕಟ್ಟಲು ಸಾಧ್ಯವಾಗಿರಲಿಲ್ಲ ಇದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ.

Leave a Reply

Your email address will not be published. Required fields are marked *