ಉಡುಪಿ:(ಡಿ.21) ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಖ್ಯಪೇಟೆಯಲ್ಲಿ ನಡೆದಿದೆ.
ಇದನ್ನೂ ಓದಿ: ಮಂಗಳೂರು : 2020 ರ ಕೊಲೆ ಪ್ರಕರಣ
ಉಡುಪಿಯತ್ತ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಉಚ್ಚಿಲ ನಿವಾಸಿ ಶಿವಪ್ಪ (63) ಅವರಿಗೆ ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಶಿವಪ್ಪ ಅವರು ಹೆದ್ದಾರಿಯನ್ನು ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಸ್ತೆಗೆ ಅಪ್ಪಳಿಸಲ್ಪಟ್ಟ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು,
ಸಾರ್ವಜನಿಕರ ಸಹಕಾರದಿಂದ ತಕ್ಷಣವೇ ಸ್ಥಳೀಯ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.