Fri. Dec 27th, 2024

Ration card: ರೇಷನ್‌ ಕಾರ್ಡ್‌ ತಿದ್ದುಪಡಿ & ಸೇರ್ಪಡೆಗೆ ಕೊನೆಯ ದಿನ ಯಾವಾಗ ?!

Ration card:(ಡಿ.22) ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಡಿ. 31 ರವರೆಗೆ ಆಹಾರ ಇಲಾಖೆ ಅವಕಾಶ ನೀಡಿದ್ದು, ತಿದ್ದುಪಡಿ ಹಾಗೂ ಹೊಸ ಸದಸ್ಯರ ಸೇರ್ಪಡೆ ಸಂಬಂಧ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮ್ಯಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ


ತಿದ್ದುಪಡಿ ಮಾಡಿಕೊಳ್ಳುವವರು ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಯೊಂದಿಗೆ ತೆರಳಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು. ಇದಕ್ಕಾಗಿ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಏನೆಲ್ಲಾ ದಾಖಲೆಗಳು ಬೇಕು?;
*‌ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕು.
*‌ ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
*‌ ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ ನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್.ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.

ಏನೆಲ್ಲಾ ಅಪ್ಡೇಟ್ ಮಾಡಬಹುದು..?:

  • ವಿಳಾಸ ಬದಲಾವಣೆ
  • ಕುಟುಂಬಕ್ಕೆ ಸೇರಿದವರ ಹೆಸರು ತೆಗೆಯುವುದು
  • ಪೋಟೋ ಮತ್ತು ಬಯೋಮೆಟ್ರಿಕ್
  • ಕುಟುಂಬ ಸದಸ್ಯರ ಹೆಸರು ತಿದ್ದುಪಡಿ
  • ಮನೆ ಯಜಮಾನರ ಬದಲಾವಣೆ
  • ಹೊಸ ಸದಸ್ಯರ ಸೇರ್ಪಡೆ

Leave a Reply

Your email address will not be published. Required fields are marked *