ಬೆಂಗಳೂರು:(ಡಿ.23) ಹೊರರಾಜ್ಯದಿಂದ ಯುವತಿಯರನ್ನು ಕರೆಸಿ ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು : ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಬ್ಲ್ಯಾಕ್ ಮೇಲ್
ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಹೊರರಾಜ್ಯಗಳಿಂದ ಯುವತಿಯರನ್ನು ಕರೆಸಿ, ಸ್ಪಾಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಆರೋಪಿ ವಿರುದ್ಧ ಮಾನವ ಕಳ್ಳಸಾಗಣೆ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ.
ಅಲ್ಲದೆ, ಗೂಂಡಾಕಾಯ್ದೆ ಅಡಿ ಬಂಧಿಸಿದ್ದು, ಬಳ್ಳಾರಿ ಜೈಲಿಗಟ್ಟುವಂತೆ ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.