Fri. Dec 27th, 2024

Hyderabad: ನಟ ಅಲ್ಲು ಅರ್ಜುನ್ ನಿವಾಸದ ಬಳಿ ಪುಂಡಾಟ – ಆರು ಮಂದಿ ಬಂಧನ

ಹೈದರಾಬಾದ್:(ಡಿ.23) ಪುಷ್ಪ-2 ಪ್ರೀಮಿಯರ್ ಶೋ ವೇಳೆ ನಡೆದಿದ್ದ ದುರಂತದಲ್ಲಿ ಮೃತಪಟ್ಟಿದ್ದ ಮಹಿಳೆಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಒಸ್ಮನಿಯಾ ವಿವಿ ಜಂಟಿ ಕ್ರಿಯಾ ಸಮಿತಿ ಎಂದು ಹೇಳಿಕೊಂಡ ಗುಂಪೊಂದು ತೆಲುಗು ನಟ ಅಲ್ಲು ಅರ್ಜುನ್ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿ ಹೂವಿನ ಕುಂಡಗಳು ಮತ್ತಿತರ ವಸ್ತುಗಳನ್ನು ಧ್ವಂಸಗೊಳಿಸಿದೆ.

ಇದನ್ನೂ ಓದಿ: Kuwait: ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ “ಮುಬಾರಕ್ ಅಲ್-ಕಬೀರ್ ಆರ್ಡರ್” ಗೌರವ


ಈ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ ಖಂಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿದ್ದಾರೆ.


ನಟ ಅಲ್ಲು ಅರ್ಜುನ್ ನಿವಾಸದ ಮೇಲೆ ಕಲ್ಲು ತೂರಾಟ ಮತ್ತು ಟೊಮೆಟೋ ಎಸೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಪ್ರಶ್ನಿಸಿದ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ.

ಸುದ್ದಿ ತಿಳಿದು ಜುಬಿಲಿ ಹಿಲ್ಸ್ ಪೊಲೀಸರು ಸ್ಥಳಕ್ಕೆ ಧಾವಿಸಿ, ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಧ್ವಂಸದಲ್ಲಿ ಪಾಲ್ಗೊಂಡ ಆರು ಮಂದಿ ಮತ್ತಿತರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಘಟನೆ ನಡೆದಾಗ ಅಲ್ಲು ಅರ್ಜುನ್ ಮನೆಯಲ್ಲಿ ಇರಲಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *