Fri. Dec 27th, 2024

Mangaluru: ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಬ್ಲ್ಯಾಕ್‌ ಮೇಲ್‌ – ಆರೋಪಿ ಅರೆಸ್ಟ್!!

ಮಂಗಳೂರು :(ಡಿ.23) ಲೋಕಾಯುಕ್ತ ಅಧಿಕಾರಿಯ ಹೆಸರು ಹೇಳಿಕೊಂಡು ವಂಚನೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: 18 ರ ಯುವಕನ ಜೊತೆಗೆ 51 ರ ಆಂಟಿಯ ಕುಚುಕುಚು

ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ನಲ್ಲಗುಟ್ಲಪಲ್ಲಿ ನಿವಾಸಿ ಧನಂಜಯ ರೆಡ್ಡಿ ತೋಟ ಬಂಧಿತ ಆರೋಪಿ.

2024ರ ಏಪ್ರಿಲ್ 6ರಂದು ಸೋಮೇಶ್ವರ ಪುರಸಭೆಯಲ್ಲಿ ರೆವಿನ್ಯೂ ಆಫೀಸರ್ ರವರಾದ ಪುರುಷೋತ್ತಮ ರವರ ಮೊಬೈಲ್ ನಂಬ್ರದ ವಾಟ್ಸ್ ಆಪ್ ಕಾಲ್ ಮಾಡಿದ ಆರೋಪಿಯು ತಾನು ಲೋಕಾಯುಕ್ತದಿಂದ ಮಾತನಾಡುತ್ತಿರುವುದು ನಿಮ್ಮ ಮೇಲೆ ಅಲಿಗೇಶನ್ ಬಂದಿದೆ. ನಮ್ಮ ಟೆಕ್ನಿಕಲ್ ಆಫೀಸರ್ ನಿಮ್ಮ ಆಫೀಸಿಗೆ ಬರುವ ಮೊದಲು ಅದನ್ನು ಸರಿ ಮಾಡುವುದಾದರೆ ಮಾಡುವ ಎಂದು ಹೇಳಿ, ಹಣ ನೀಡುವಂತೆ ತಿಳಿಸಿ, ಇಲ್ಲವಾದರೆ ತೊಂದರೆ ಮಾಡುವುದಾಗಿ ಹೇಳಿದ್ದಾನೆ.

ಬಳಿಕ ಕರೆ ಮಾಡಿದ ಆರೋಪಿಯ ಮೊಬೈಲ್ ನಂಬ್ರವನ್ನು ಟೂಕಾಲರ್ ನಲ್ಲಿ ಪರೀಶೀಲಿಸಿದಾಗ ಡಿ. ಪ್ರಭಾಕರ. ಲೋಕಾಯುಕ್ತ. ಪಿ.ಐ ಎಂದು ತೋರಿಸಿತ್ತು. ಈ ಬಗ್ಗೆ ಪುರುಷೋತ್ತಮರವರು ಕರ್ನಾಟಕ ಲೋಕಾಯುಕ್ತ ಮಂಗಳೂರು ಇಲ್ಲಿನ ಅಧಿಕಾರಿಗಳಲ್ಲಿ ಪೋನ್ ಮೂಲಕ ವಿಷಯ ತಿಳಿಸಿದಾಗ ಅಂತಹ ಹೆಸರಿನ ಯಾವುದೇ ಅಧಿಕಾರಿ/ಸಿಬ್ಬಂದಿಗಳು ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಪುರುಷೋತ್ತಮ ರವರ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಕರಾದ ಲಿಲ್ಲಿ ನಾಯರ್ ಮತ್ತು ಹಿರಿಯ ಆರೋಗ್ಯ ನಿರೀಕ್ಷಕರಾದ ಕೃಷ್ಣ. ಆರ್. ರವರಿಗೆ ಕೂಡಾ ಇದೇ ರೀತಿ ಕರೆ ಮಾಡಿ ಬೆದರಿಕೆ ಒಡ್ಡಿರುತ್ತಾರೆ.

ಕರೆ ಮಾಡಿದ ವ್ಯಕ್ತಿಯು ಪುರುಷೋತ್ತಮ ರವರ ಹಣವನ್ನು ಮೋಸದಿಂದ ಪಡೆದುಕೊಳ್ಳುವ ಉದ್ದೇಶದಿಂದ ಕರ್ನಾಟಕ ಲೋಕಾಯುಕ್ತ ಎಂದು ನಟಿಸಿ ನಂಬಿಸಿ ಸುಳ್ಳು ಹೇಳಿರುವುದಲ್ಲದೆ, ಹಣಕ್ಕಾಗಿ ಬೆದರಿಕೆ ಒಡ್ಡಿದ್ದಾನೆ. ಜೊತೆಗೆ ಆ ವ್ಯಕ್ತಿ ಪುರುಷೋತ್ತಮ ಅವರ ಕಛೇರಿ ಸಿಬ್ಬಂದಿ ಅಧಿಕಾರಿಗಳಿಗೆ ಹಣಕ್ಕಾಗಿ ಬೆದರಿಕೆ ಒಡ್ಡಿರುತ್ತಾನೆ ಎಂಬಿತ್ಯಾದಿಯಾಗಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಆರೋಪಿಯು ಇದೇ ರೀತಿಯ ಕೃತ್ಯ ಎಸಗಿದ ಬಗ್ಗೆ ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 385, 419, 420, 506 ಐಪಿಸಿ ಯಂತೆ ಹಾಗೂ 2019 ರಲ್ಲಿ ಹೈದರಾಬಾದ್ ನಗರದ ಶಾಬಾದ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 342, 352, 115, 120 ಐಪಿಸಿಯಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುವುದಾಗಿ ತಿಳಿದುಬಂದಿದೆ.

ಈ ಪ್ರಕರಣದ ಆರೋಪಿಯ ಪತ್ತೆಯ ಬಗ್ಗೆ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ರವಿಶಂಕರ್ ರವರ ನಿರ್ದೇಶನದಲ್ಲಿ ದಕ್ಷಿಣ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ ಎಸ್ ನಾಯಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರು ಉಳ್ಳಾಲ ಪೊಲೀಸ್ ಠಾಣೆ ರವರ ಸಲಹೆಯಂತೆ ಉಳ್ಳಾಲ ಪೊಲೀಸ್ ಠಾಣಾ ಪಿಎಸ್‌ಐ ಸಂತೋಷ್ ಕುಮಾರ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಹೆಚ್ ಸಿ 386 ರಂಜಿತ್ ಕುಮಾರ್, ಸಿಪಿಸಿ-933 ಆನಂದ ಬಾಡಗಿ, ಸಿಪಿಸಿ 2386 ಮಂಜುನಾಥ ರವರು ಆರೋಪಿಯನ್ನು ತಾಂತ್ರೀಕ ಸಹಾಯದಿಂದ ಪತ್ತೆಮಾಡಿ, ಆರೋಪಿ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *