ಪುಣೆ:(ಡಿ.23) ಪುಣೆಯಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಡಂಪರ್ ಟ್ರಕ್ ಹರಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ವಿಜಯನಗರ : 80 ಜನ ಪ್ರಯಾಣಿಕರಿದ್ದ ಬಸ್ಸನ್ನು ಸೀದಾ ಪೊಲೀಸ್ ಠಾಣೆಗೆ ಕೊಂಡೊಯ್ದ ಡ್ರೈವರ್
ವಾಘೋಲಿಯಲ್ಲಿ ಮಧ್ಯರಾತ್ರಿ 12.30ರ ಸುಮಾರಿಗೆ ಟ್ರಕ್ ಚಾಲಕ ಜನರ ಮೇಲೆ ಹರಿದಿದ್ದರಿಂದ ಮೂವರು ಮೃತಪಟ್ಟಿದ್ದಾರೆ, ಆರು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇಶ್ನಂದ್ ಫಾಟಾ ಪ್ರದೇಶದ ಬಳಿ ಫುಟ್‌ಪಾತ್‌ನಲ್ಲಿ ಅನೇಕ ಜನರು ಮಲಗಿದ್ದರು. ಅವರಲ್ಲಿ ಹೆಚ್ಚಿನವರು ಕಾರ್ಮಿಕರು. ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ .