ವಿಜಯನಗರ :(ಡಿ.23) 80 ಪ್ರಯಾಣಿಕರಿದ್ದ ಬಸ್ ಅನ್ನು ಚಾಲಕ ಹಾಗೂ ಕಂಡಕ್ಟರ್ ಸೀದಾ ಪೊಲೀಸ್ ಠಾಣೆಗೆ ತಂದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ಇದನ್ನೂ ಓದಿ: ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿಯ ಮೇಲೆ ಅತ್ಯಾಚಾರ
ಅಂಬಮ್ಮ ಹೊಸಪೇಟೆ ಯಿಂದ ಕೊಪ್ಪಳಕ್ಕೆ ಸಾರಿಗೆ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಮುನಿರಾಬಾದ್‌ನಲ್ಲಿ 9 ಗ್ರಾಂ ಬಂಗಾರ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ. ಬಂಗಾರ ಕಳ್ಳತನವಾಗಿದೆ. ಕೂಡಲೇ ಬಸ್ ನಿಲ್ಲಿಸಿ ಎಂದು ಅಂಬಮ್ಮ ಹಾಗೂ ಮಗಳು ಕೂಗಾಡಿದ್ದಾರೆ.
ಇದನ್ನೂ ಓದಿ;Daily Horoscope: ಸಿಂಹ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿ!!!
ಮಹಿಳೆ ರಾದ್ಧಾಂತ ಹಿನ್ನಲೆ ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೆ ಬಸ್ ತಂದಿದ್ದಾರೆ. ಹೊಸಪೇಟೆ ನಗರ ಠಾಣೆಗೆ ಬಸ್ ತರಲಾಗಿದ್ದು, ಪ್ರಯಾಣಿಕರ ತಪಾಸಣೆ ನಡೆಸಲಾಗಿದೆ. ಆದರೆ ಚಿನ್ನಾಭರಣ ಪತ್ತೆಯಾಗಿಲ್ಲ ಎನ್ನಲಾಗಿದೆ.