ಕಟಪಾಡಿ:(ಡಿ.24) ಎಸ್.ವಿ.ಕೆ./ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದ ಪ್ರಾಥಮಿಕ ವಿಭಾಗದ ಬಹುಮಾನ ವಿತರಣೆ ಸಮಾರಂಭವು ಡಿಸೆಂಬರ್ 23 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಕೆ. ಸತ್ಯೇಂದ್ರ ಪೈ ವಹಿಸಿದ್ದರು. ಅವರು ಮಾತನಾಡಿ, “ವಿದ್ಯಾರ್ಥಿಗಳ ಸಾಧನೆಗೆ ಶ್ರೇಯಸ್ಸು ಸಿಕ್ಕಿರುವುದು ಪೋಷಕರ ಸಹಕಾರ, ಶಿಕ್ಷಕರ ಮಾರ್ಗದರ್ಶನ ಮತ್ತು ಮಕ್ಕಳು ತೊಡಗಿಕೊಳ್ಳುವ ಪ್ರವೃತ್ತಿಯ ಫಲವಾಗಿದೆ. ನಮ್ಮ ಶಾಲೆಯ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಮುಂದುವರಿಯುವಂತೆ ಮಾಡುವ ಮೂಲಕ ದೇಶದ ಉಜ್ವಲ ಭವಿಷ್ಯವನ್ನು ರೂಪಿಸಲು ನಾವು ಬದ್ಧರಾಗಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.
ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಬಿ. ಚಂದ್ರಕಾಂತ್ ಪೈ ಮಾತನಾಡಿ, “ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಹೊಸ ಸ್ಫೂರ್ತಿಯನ್ನು ನೀಡುತ್ತವೆ. ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪ್ರಮೀಳಾ ಜತ್ತನ್ನ ಮಾತನಾಡಿ, “ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸಲು ಈ ರೀತಿಯ ಕಾರ್ಯಕ್ರಮಗಳು ಬಹು ಸಹಕಾರಿಯಾಗಿವೆ” ಎಂದು ಅಭಿಪ್ರಾಯಪಟ್ಟರು.
ಆಡಳಿತ ಮಂಡಳಿಯ ಸದಸ್ಯ ಶ್ರೀನಿವಾಸ ಕಿಣಿ, ಶಾಲಾ ಆಡಳಿತಾಧಿಕಾರಿ ಸುಧಾಕರ್ ಬ್ರಹ್ಮಾವರ, ಮುಖ್ಯ ಶಿಕ್ಷಕಿ ಶ್ವೇತಾ ಶೆಟ್ಟಿ, ವಿದ್ಯಾರ್ಥಿ ನಾಯಕ ದೀಪಕ್, ಹಾಗೂ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಮೋಹಿನಿ ಸುರೇಶ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಿಎಟಿಎ ಸದಸ್ಯರು, ವಿದ್ಯಾರ್ಥಿಗಳು, ಮತ್ತು ಪೋಷಕರು ಈ ಸಮಾರಂಭದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.