Lakshmi Hebbalkar:(ಡಿ.24) ಕೆಲ ದಿನಗಳ ಹಿಂದೆ ಸುವರ್ಣಸೌಧದ ಪರಿಷತ್ ಕಲಾಪದಲ್ಲಿ ಎಂಎಲ್‌ಸಿ ಸಿ.ಟಿ ರವಿ ಅವರು ಸಂವಿಧಾನಿಕ ಪದ ಬಳಸಿ ನಿಂಧಿಸಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಸಿ.ಟಿ ರವಿ ಆ ರೀತಿ ಹೇಳಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ ಅಂತ ಸವಾಲ್ ಹಾಕಿದ್ದಾರೆ.
ಇದನ್ನೂ ಓದಿ: ಮಂಗಳೂರು: ಸೈಬರ್ ವಂಚಕರಿಗೆ ದುಬೈನಲ್ಲಿ ಸಿಮ್ ಮಾರಾಟ ಮಾಡಿದ್ದ ಆರೋಪಿ ಮಂಗಳೂರು ಸೆನ್ ಪೋಲಿಸರ ವಶಕ್ಕೆ!!
ರಾಮಾಯಣ, ಮಹಾಭಾರತ ಆಗಿದ್ದು, ಮಹಿಳೆಯನ್ನು ಅಪಮಾನ ಮಾಡಿದ್ದಕ್ಕೆ. ಅಲ್ಲಿ ಅಪಮಾನ ಮಾಡಿದ ಎಲ್ಲರಿಗೂ ಶಿಕ್ಷೆ ಆಗಿದೆ. ಇಲ್ಲಿಯೂ ಆಗುತ್ತೆ. ಸಿ.ಟಿ ರವಿ ಅವರು ಆ ರೀತಿ ಹೇಳಿಲ್ಲ ಅನ್ನೋದಾದ್ರೆ, ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ. ಆಣೆ ಮಾಡಲಿಕ್ಕೆ ನಾನೂ ನನ್ನ ಕುಟುಂಬ ಸಮೇತವಾಗಿ ಬರ್ತೀನಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಸಿ.ಟಿ ರವಿ ಈ ರೀತಿ ಅಂದಿದ್ದಾರೆ ಅಂತಾ ನಾನು ನಾಟಕ ಮಾಡೋದಕ್ಕೆ ಆಗುತ್ತಾ? ಸದನದಲ್ಲಿ ನಿಂತು ಸುಳ್ಳು ಆರೋಪ ಮಾಡೋದಕ್ಕೆ ಆಗುತ್ತಾ? ಸುಳ್ಳು ಹೇಳೋದಕ್ಕೆ ನನಗೇನು ಹುಚ್ಚಾ? ನಾಟಕವಾಡಿ ರಾಜಕಾರಣದಲ್ಲಿ ನಾನು ಏನಾದ್ರೂ ಗಳಿಸೋದು ಇದ್ಯಾ? ಎಂದು ಪ್ರಶ್ನೆ ಮಾಡಿದ್ದಾರೆ.
“ಫ್ರೆಸ್ಟ್ರೇಟ್” ಎಂದು ಉಚ್ಚಾರ ಮಾಡಿರುವುದಾಗಿ ಸಿ.ಟಿ ರವಿ ಹೇಳ್ತಾರಲ್ಲಾ? ಫ್ರೆಸ್ಟ್ರೇಟ್ ಅನ್ನೋದಕ್ಕೂ ಆಪದಕ್ಕೂ ವ್ಯತ್ಯಾಸ ಇರಲ್ವಾ? ಅವರು ಹೇಳಿರೋದಕ್ಕೆ ಆಡಿಯೋ, ವಿಡಿಯೋ ಎಲ್ಲವೂ ನನ್ನತ್ರ ಸಾಕ್ಷಿ ಇದೆ. ಲಕ್ಷ್ಮಿ ಹೆಬ್ಬಾಳ್ಕರ್‌ನ ನೋಡಿ ಸಾವಿರಾರು ಜನ ರಾಜಕಾರಣಕ್ಕೆ ಬರಲು ಮುಂದಾಗಿದ್ದಾರೆ. ಈಗ ಹೋರಾಟ ಮಾಡಲಿಲ್ಲ ಅಂದ್ರೆ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿದಂತೆ ಆಗುತ್ತದೆ. ನಾನು ಸಂಘರ್ಷ ಅಪಮಾನ ಮೆಟ್ಟಿನಿಂತು ಬೆಳೆದಿದ್ದೇನೆ. ಆದ್ರೆ ಈ ಘಟನೆಯಿಂದ ನನ್ನ ಮನಸ್ಸಿಗೆ ಆಘಾತ ಉಂಟಾಗಿದೆ ಎಂದರು.