ಬೆಳಾಲು :(ಡಿ.26) ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿಸೆಂಬರ್ 25 ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ ಜರುಗಿತು.
ಇದನ್ನೂ ಓದಿ: ಉಡುಪಿ: ಪಿಕಪ್-ಕಾರಿನ ನಡುವೆ ಅಪಘಾತ
ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ ಉದಿತ್ ಕುಮಾರ್ ಜೈನ್ ಇವರು ವಹಿಸಿಕೊಂಡಿದ್ದರು. ಧಾರ್ಮಿಕ ಭಾಷಣಕಾರರಾಗಿ ಆಗಮಿಸಿದ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಧರ್ಮದ ಬಗ್ಗೆ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ನ ಮಾಲಕರಾದ ಶ್ರೀ ಮೋಹನ್ ಕುಮಾರ್ ಸಮಾಯೋಚಿತವಾಗಿ ಮಾತನಾಡಿದರು, ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಜೀವಂಧರ್ ಕುಮಾರ್ ಜೈನ್, ಅಸ್ರಣ್ಣರಾದ ಶ್ರೀ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಗೌಡ,
ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಮಮತಾ ದಿನೇಶ್ ಪೂಜಾರಿ, ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ನವೀನ್ ಗೌಡ ಕಂಬಳದಡ್ಡ ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದುರ್ಗಾಪ್ರಸಾದ್ ಕೆರ್ಮುಣ್ಣಾಯ ಸ್ವಾಗತಿಸಿ, ಮಹಿಳಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ವಂದಿಸಿದರು.ಶ್ರೀ ಗಿರೀಶ್ ಕುಮಾರ್ ಎಂ ಮತ್ತು ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರು ಕಾರ್ಯಕ್ರಮ ನಿರೂಪಿಸಿದರು.