Mon. Apr 7th, 2025

Belthangady: ಗುರುವಾಯನಕೆರೆಯ “ಕೆರೆ” ಗೆ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ, ಪರಿಶೀಲನೆ

ಬೆಳ್ತಂಗಡಿ :(ಡಿ.26) ವಿಶಾಲವಾಗಿ ತೆರೆದುಕೊಂಡಿರುವ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಗೆ ಡಿ.26ರಂದು ದೂರು ಬಂದ ಮೇರೆಗೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಬೆಳ್ತಂಗಡಿ: ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು “ದಯಾ ಫಿಯೆಸ್ತಾ – 2024”

ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದ ಹಿನ್ನಲೆ ಬಿ.ಎಸ್.ಪಾಟೀಲ್ ಅವರು ಕುವೆಟ್ಟು ಪಂಚಾಯತ್ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು. ಈ ವೇಳೆ ಕೆರೆಯ ಸುತ್ತಮುತ್ತಲಿನ ಪ್ರದೇಶದ ವಾತಾವರಣ ನೋಡಿ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದು. ಕೆರೆಯ ಸುತ್ತ ಕಾರಿಡಾರ್ ನಿರ್ಮಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರೂ ಅಲ್ಲದೆ ಕೆರೆಯ ಒತ್ತುವರಿಯ ಬಗ್ಗೆ ಹತ್ತು ದಿನದ ಒಳಗೆ ಸರ್ವೆ ನಡೆಸಿ ವರದಿ ನೀಡುವಂತೆ ಬೆಳ್ತಂಗಡಿ ತಹಶೀಲ್ದಾರರಿಗೆ ಸ್ಥಳದಲ್ಲಿಯೇ ಸೂಚಿಸಿದರು.


ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ವೇಳೆ ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್.ಎಮ್.ಎ, ಇನ್ಸೆಕ್ಟರ್ ಅಮಾನುಲ್ಲಾ, ಸುರೇಶ್, ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕುವೆಟ್ಟು ಗ್ರಾಮ ಪಂಚಾಯತ್ ಪಿಡಿಓ ಇಮ್ಮಿಯಾಜ್, ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮ ಆಡಳಿತಾಧಿಕಾರಿ ಗೌತಮಿ ಹಾಗೂ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *