Sat. Dec 28th, 2024

Karwar: ಪಿಗ್ಮಿ ಸಂಗ್ರಹಿಸುತ್ತಿದ್ದ ಮಹಿಳೆಯ ಕೊಲೆ!!!

ಕಾರವಾರ :(ಡಿ.26) ಪಿಗ್ಮಿ ಸಂಗ್ರಹಿಸುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಸಿದ್ದಾಪುರ ಪಟ್ಟಣದ ಬಸವನಗಲ್ಲಿಯಲ್ಲಿ ನಡೆದಿದೆ.

ಇದನ್ನೂ ಓದಿ: ಬೆಳಾಲು :ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಗೀತಾ ಪ್ರಭಾಕರ ಹುಂಡೇಕರ್ (72) ಕೊಲೆಯಾದ ಮಹಿಳೆ.


ಒಬ್ಬಂಟಿಯಾಗಿ ವಾಸಿಸುತ್ತಿದ್ದ ಗೀತಾ ಅವರು ವಿನಾಯಕ ಸೌಹಾರ್ದ ಕೋ – ಆಪರೇಟಿವ್ ಸೊಸೈಟಿಗೆ ದಿನವೂ ಐದರಿಂದ ಹತ್ತು ಸಾವಿರ ಪಿಗ್ಮಿ ಸಂಗ್ರಹಿಸುತ್ತಿದ್ದರು. ಇದನ್ನರಿತ ದುಷ್ಕರ್ಮಿಗಳು ಹಣಕ್ಕಾಗಿ ಮಹಿಳೆಯನ್ನು ಕೊಲೆ ಮಾಡಿದ್ದಾರೆಂದು ಶಂಕಿಸಲಾಗಿದೆ.


ಈ ಕುರಿತು ಗೀತಾ ಅವರ ಅಳಿಯ ರಾಘವೇಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದು ಸಿದ್ದಾಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *