Fri. Dec 27th, 2024

Muslim Nation: ಮುಸ್ಲಿಂ ರಾಷ್ಟ್ರವಾಗಿ ಹೊರಹೊಮ್ಮಲಿದೆಯಂತೇ ಭಾರತ??!!

Muslim Nation:(ಡಿ.27) ಭಾರತವು ಜಾತ್ಯಾತೀತ ರಾಷ್ಟ್ರ. ಇದರೊಂದಿಗೆ ಹಲವು ಧರ್ಮಗಳಿಗೆ ಭಾರತವು ಆಶ್ರಯ ನೀಡಿದೆ. ಆದರೆ ಈ ವರ್ಷದ ವೇಳೆಗೆ ಭಾರತ ಮುಸ್ಲಿಂ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ವರದಿಯೊಂದು ತಿಳಿಸಿದೆ.

ಇದನ್ನೂ ಓದಿ: ಮಂಗಳೂರು : ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಯುವಕರು

2050 ರ ವೇಳೆಗೆ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದೆ ಎನ್ನಲಾಗಿದೆ. ಪ್ಯೂ ರಿಸರ್ಚ್ ಸೆಂಟರ್ ಈ ಕುರಿತು ವರದಿ ನೀಡಿದೆ.

ಪ್ರಸ್ತುತ, ಇಂಡೋನೇಷ್ಯಾ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದ್ದು, ಇಂಡೋನೇಷ್ಯಾವು 2050 ರ ವೇಳೆಗೆ 257 ಮಿಲಿಯನ್ ಮುಸ್ಲಿಮರೊಂದಿಗೆ ಮೂರನೇ ಸ್ಥಾನಕ್ಕೆ ಕುಸಿಯುವ ಸಾಧ್ಯತೆಯಿದೆ.

ಆದರೆ 2025ರ ವೇಳೆಗೆ ಭಾರತವು ಇಂಡೋನೇಷ್ಯಾವನ್ನು ಮುಸ್ಲಿಂ ಜನಸಂಖ್ಯೆಯಲ್ಲಿ ಹಿಂದಿಕ್ಕಲಿದ್ದು ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎನ್ನಲಾಗಿದೆ. ಪಾಕಿಸ್ತಾನವು ಎರಡನೇ ಅತಿ ಹೆಚ್ಚು ಮುಸ್ಲಿಮರನ್ನು (273 ಮಿಲಿಯನ್) ಹೊಂದುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ.

ಅಲ್ಲದೆ ಅದರೊಂದಿಗೆ ಹಿಂದೂ ಧರ್ಮವು 2050 ರ ವೇಳೆಗೆ ವಿಶ್ವದ ಮೂರನೇ ಅತಿದೊಡ್ಡ ಧರ್ಮವಾಗಲಿದೆ. ಭಾರತವನ್ನು ಹೊರತುಪಡಿಸಿ ಉಳಿದೆಲ್ಲ ದೇಶಗಳಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಾಗಲಿದೆ ಎನ್ನುವುದು ಅಧ್ಯಯನದಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *