Sat. Dec 28th, 2024

Belthangady: ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನ – ಮೊಹಮ್ಮದ್ ರಫೀಕ್ ಬಂಧನ

ಬೆಳ್ತಂಗಡಿ:(ಡಿ.28) ಮೂಡುಬಿದಿರೆ ಸಮೀಪದ ಮೂಡುಕೊಣಾಜೆ ಗ್ರಾಮದ ಕೈಕಂಜಿಪಡ್ಪು ಸೇತುವೆ ಬಳಿನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ಆರೋಪಿಯೋರ್ವನನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು : ತಿರುಪತಿ ತಿರುಮಲದ ಲಡ್ಡು ಪುತ್ತೂರಿನಲ್ಲಿ ಸಿದ್ಧ


ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮುಹಮ್ಮದ್ ರಫೀಕ್ ಬಂಧಿತ ಆರೋಪಿ.
ಮೂಡುಬಿದಿರೆ ಸಮೀಪದ ಮೂಡುಕೊಣಾಜೆ ಗ್ರಾಮದ ಕೈಕಂಜಿಪಡ್ಪು ಸೇತುವೆ ಬಳಿ ಈತ ಗಾಂಜಾ ವ್ಯಸನಿಗಳಿಗೆ ಮಾರಾಟ ಮಾಡಲೆತ್ನಿಸುತ್ತಿದ್ದ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಆರೋಪಿಯಿಂದ 900 ಗ್ರಾಂ.ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ತಂಡದಲ್ಲಿ ಎಸ್.ಐ.ಸಿದ್ದಪ್ಪ, ಎ.ಎಸ್.ಐ ಪ್ರಶಾಂತ್, ಕ್ರೈಮ್ ವಿಭಾಗದ ಸಿಬ್ಬಂಧಿಗಳಾದ ಮುಹಮ್ಮದ್ ಇಕ್ಬಾಲ್, ಮುಹಮ್ಮದ್ ಹುಸೇನ್, ಅಕೀಲ್ ಅಹ್ಮದ್, ರಾಜೇಶ್, ನಾಗರಾಜ ಲಮಾಣಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *