Sat. Jan 4th, 2025

Church: ಚರ್ಚ್‌ಗೆ ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ!!! – ಆಮೇಲೆ ಆಗಿದ್ದೇನು?!!

Church:(ಡಿ.28) ಚರ್ಚ್‌ನೊಳಗೆ ವ್ಯಕ್ತಿಯೊಬ್ಬ ಗುಟ್ಟಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ ಘಟನೆ ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಬೋಳಾರ ಸಿಟಿ ಬೀಚ್‌ನಲ್ಲಿ ಆಯೋಜಿಸಿದ್ದ ಡಿಜೆ ಸಜಂಕಾ ಕಾರ್ಯಕ್ರಮ ರದ್ದು!!

ಆಕಾಶ್ ಸಾಗರ್ ಎಂಬಾತ ಮಾವಿನ್ನಾಂಗ್ ಗ್ರಾಮದ ಚರ್ಚ್ ಒಳಗೆ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೆ, ಬಳಿಕ ಜೈ ಶ್ರೀರಾಂ ಘೋಷಣೆ ಕೂಗಿ ಅದರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಪೊಲೀಸರು ಆತನ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಉದ್ದೇಶಪೂರ್ವಕ ಕೃತ್ಯವಾಗಿದೆ ಆದ್ದರಿಂದ ಮೇಘಾಲಯ ಸಿಎಂ ಕಾನಾಡ್ ಸಂಗ್ರಾ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರವು ಸಾಮಾಜಿಕ, ಧಾರ್ಮಿಕ ಅಥವಾ ಕೋಮು ಸಾಮರಸ್ಯ ಕದಡುವುದಕ್ಕೆ ಅವಕಾಶ ಮಾಡಿ ಕೊಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಇಂತದ್ದೇ ಪ್ರಕರಣ 2023ರಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದ್ದು, ಇಬ್ಬರು ವ್ಯಕ್ತಿಗಳು ಮಸೀದಿಯೊಳಗೆ ತೆರಳಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ.

Leave a Reply

Your email address will not be published. Required fields are marked *