Sat. Jan 4th, 2025

Mangaluru: ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಬೋಳಾರ ಸಿಟಿ ಬೀಚ್‌ನಲ್ಲಿ ಆಯೋಜಿಸಿದ್ದ ಡಿಜೆ ಸಜಂಕಾ ಕಾರ್ಯಕ್ರಮ ರದ್ದು!!

ಮಂಗಳೂರು:(ಡಿ.28) ಇಸ್ರೇಲ್ ಮೂಲದ ಪ್ರಖ್ಯಾತ ಡಿಜೆ ಸಜಂಕಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಡಿಜೆ ಕಾರ್ಯಕ್ರಮ ಕೊನೆ ಕ್ಷಣದಲ್ಲಿ ರದ್ದಾಗಿದೆ. ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕೊನೆ ಕ್ಷಣದಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಇದರಿಂದಾಗಿ ಮಂಗಳೂರಿನ ಬೋಳಾರದ ಸಿಟಿ ಬೀಚ್‌ನಲ್ಲಿ ನಿನ್ನೆ ಸಂಜೆ ನಡೆಯಬೇಕಿದ್ದ ಕಾರ್ಯಕ್ರಮ ರದ್ದಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಬೆಳ್ತಂಗಡಿ ಜೇಸಿ ಸಪ್ತಾಹದಲ್ಲಿ ಮುಳಿಯ ಜ್ಯುವೆಲ್ಸ್ ಸಂಸ್ಥೆಗೆ “ಸೇವಾಶ್ರೀ ಪ್ರಶಸ್ತಿ” ಪ್ರದಾನ

ಜಗತ್ತಿನ ಪ್ರಖ್ಯಾತ ಸಂಗೀತಗಾರ ಡಿಜೆ ಸಜಂಕಾ ಕಾರ್ಯಕ್ರಮ ಮಂಗಳೂರಿನ ಸಿಟಿ ಬೀಚ್ ನಲ್ಲಿ ನಿನ್ನೆ ಸಂಜೆ ಆಯೋಜಿಸಲಾಗಿತ್ತು. ಆದರೆ ಡಿಜೆ ಸಜಂಕಾ ವಿರುದ್ದ ಹಿಂದೂ ಸಂಘಟನೆಗಳು ಹಿಂದೂ ದೇವರ ಅವಹೇಳನ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ಪ್ರಚಾರ ಎಂದು ಆರೋಪಿಸಿದ್ದವು. ಸಜಂಕಾ ಡಿಜೆ ಕಾರ್ಯಕ್ರಮದಲ್ಲಿ ಹಿಂದೂ ದೇವರ ಶ್ಲೋಕ, ಮಂತ್ರ, ಗಾಯತ್ರಿ ಮಂತ್ರ, ವಿಷ್ಣು ಸಹಸ್ರನಾಮ ಹಾಗೂ ದುರ್ಗಾ ಸಪ್ತಶತಿ ಮಂತ್ರಗಳನ್ನು ವಿಡಂಬನೆಯ ರೂಪದಲ್ಲಿ ಬಳಸಲಾಗುತ್ತಿದೆ.

ಬಜರಂಗದಳ ಮತ್ತು ಹಿಂದೂ ಜಾಗರಣಾ ವೇದಿಕೆ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಕಾರ್ಯಕ್ರಮ ನಡೆದರೆ ಅದೇ ಸ್ಥಳದಲ್ಲಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದವು. ಇನ್ನು ಈ ಕಾರ್ಯಕ್ರಮಕ್ಕೆ ಈಗಾಗಲೇ ಟಿಕೆಟ್ ಮಾರಾಟ ಪ್ರಕ್ರಿಯೆ ಪೂರ್ಣಗೊಂಡಿತ್ತು. ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಹಿಂದೂ ಸಂಘಟನೆಗಳ ಪ್ರತಿಭಟನೆಯ ಎಚ್ಚರಿಕೆ ಬೆನ್ನಲ್ಲೇ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಇನ್ನು ಡಿಜೆ ಸಜಂಕಾ ಈಗಾಗಲೇ ಮಂಗಳೂರಿಗೆ ಆಗಮಿಸಿದ್ದು, ರದ್ದಾದ ಹಿನ್ನೆಲೆ ವಾಪಸ್ ತೆರಳಲಿದ್ದಾರೆ.

Leave a Reply

Your email address will not be published. Required fields are marked *