Sat. Jan 3rd, 2026

Nandini milk: ಸಂಕ್ರಾಂತಿ ಹಬ್ಬಕ್ಕೆ ನಂದಿನಿ ಹಾಲಿನ ದರ 5 ರೂ. ಏರಿಕೆ ಸಾಧ್ಯತೆ

Nandini milk:(ಡಿ.28) ಸಂಕ್ರಾಂತಿ ಹಬ್ಬದ ನಂತರ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಹಾಲಿನ ದರ ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಪರಿಶೀಲಿಸುತ್ತೇವೆ. ದರ ಏರಿಕೆ ದುಡ್ಡು ರೈತರ ಕೈ ಸೇರುತ್ತೆ ಎಂದು ಹೇಳಿದರು.

ಇದನ್ನೂ ಓದಿ: ಚಿಕ್ಕಮಗಳೂರು : ಮದುವೆಯಾಗಿ ಒಂದು ತಿಂಗಳಲ್ಲೇ ನೇಣಿಗೆ ಕೊರಳೊಡ್ಡಿದ ನವವಧು!!

ಸರ್ಕಾರ ಈ ಹಿಂದೆ ಪ್ರತಿ ಲೀಟರ್ ಪ್ಯಾಕೇಟ್‌ನಲ್ಲಿ 50 ಎಂಎಲ್ ಹಾಲನ್ನು ಹೆಚ್ಚಿಸಿ 2 ರೂ. ದರ ಏರಿಕೆ ಮಾಡಿತ್ತು. ಇದರಿಂದ ಗ್ರಾಹಕರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದರು. ಹೀಗಾಗಿ ಇದನ್ನು ವಾಪಸ್ ಪಡೆಯಲು ಮುಂದಾಗಿದೆ. ಆದರೆ ಇದೀಗ ಸಂಕ್ರಾಂತಿ ಹಬ್ಬದ ಬಳಿಕ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಪ್ರತಿ ಲೀಟರ್‌ಗೆ 5 ರೂ. ಹೆಚ್ಚಳ ಮಾಡಲು ಮುಂದಾಗಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿಢೀರ್ ಹಾಲಿನ ಬೆಲೆ ಏರಿಕೆ ಮಾಡುವುದು ಸರಿಯಲ್ಲ. ಹಾಲಿನ ದರ ಹೆಚ್ಚಳಕ್ಕೆ ಯಾವುದೆ ಮಾನದಂಡವಿಲ್ಲ. ಈ ಬಗ್ಗೆ ತಜ್ಞರ ಸಲಹೆ ಪಡೆದು ಬಳಿಕ ಹಾಲಿನ ದರ ಹೆಚ್ಚಳ ಮಾಡಬೇಕು. ಸರ್ಕಾರ ಜನರಿಗೆ ಅನಕೂಲವಾಗಲಿ ಅಂತ ಗ್ಯಾರೆಂಟಿ ಯೋಜನೆ ಜಾರಿ ಮಾಡಿದೆ. ಆದರೆ, ಇದೀಗ ಹಾಲಿನ ದರ ಏರಿಕೆ ಮೂಲಕ ಜನರಿಗೆ ಹೊರೆ ಮಾಡುತ್ತಿರುವುದು ಸರಿಯಲ್ಲ. ಹೀಗಾಗಿ, ಹಾಲಿನ ದರ ಏರಿಕೆ ಮಾಡುವುದು ಬೇಡ ಎಂದು ಜನರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *