ರಾಮನಗರ: (ಡಿ.28) ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಮಲ್ಪೆ: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ.!!
ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸೂರನಹಳ್ಳಿಯ ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.
ಅಲ್ಲದೇ ಬಳಿಕ ವಿಡಿಯೋ ಕಾಲ್ ಮಾಡಿ ನಗ್ನ ದೇಹ ತೋರಿಸುವಂತೆ ಬೆದರಿಕೆ ಹಾಕುತ್ತಿದ್ದ ನಿನ್ನ ಖಾಸಗಿ ವಿಡಿಯೋ ಇದೆ. ಎಲ್ಲಾ ಕಡೆ ಹಾಕುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,
ಈ ದೂರಿನ ಮೇರೆಗೆ ಇದೀಗ ಸಾತನೂರು ಪೊಲೀಸರು, ಬಿಜೆಪಿ ಮುಖಂಡ ಚಲುವರಾಮು ಎನ್ನುವರನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.