Wed. Jan 1st, 2025

Kanyadi: ಸ.ಉ.ಹಿ.ಪ್ರಾ.ಶಾಲೆ ಕನ್ಯಾಡಿಯಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರ “

ಕನ್ಯಾಡಿ:(ಡಿ.29) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ – 2, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರ ” ದೀಪ ಬೆಳಗಿಸುವ ಮೂಲಕ ಉದ್ಘಾಟನೆಗೊಂಡಿತು.

ಇದನ್ನೂ ಓದಿ: ಬೆಳ್ತಂಗಡಿ: ಕೊಳಂಬೆ ದುರಂತದ ಕಿರುಚಿತ್ರ ರೆಡ್ ಇನ್‌ ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ- 2025ಕ್ಕೆ ಆಯ್ಕೆ

ಈ ತಪಾಸಣಾ ಕಾರ್ಯವು 2.5 NVG Eye Mithra ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ನಡೆಯಿತು.

ಈ ತಂಡದಲ್ಲಿದ್ದ ಶ್ರೀಯುತ ರಾಮಚಂದ್ರ ಇವರು ಕಣ್ಣಿನ ದೋಷ, ಯಾವ ರೀತಿಯಾದ ಆಹಾರ ಸೇವನೆ ಕಣ್ಣಿಗೆ ಉತ್ತಮ , ಅತಿಯಾದ ಮೊಬೈಲ್ ಬಳಕೆಯಿಂದ ಕಣ್ಣಿನ ಮೇಲಾಗುವ ದುಷ್ಪರಿಣಾಮ ಮತ್ತು ನೇತ್ರದಾನದ ಬಗ್ಗೆ ಅರಿವನ್ನು ಮೂಡಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ಕಣ್ಣಿನ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ನಂದ ಕೆ, ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದದವರು, ಪೋಷಕರು, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *