Wed. Jan 1st, 2025

School Holiday: ಡಿ.30 ರಂದು ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!!

School Holiday:(ಡಿ.29) ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಕೇಂದ್ರ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆಯನ್ನು ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ನಾಳೆ ವಿಜಯಪುರ ಜಿಲ್ಲೆ ಬಂದ್‌ಗೆ ಕರೆ ನೀಡಲಾಗಿದೆ.

ಇದನ್ನೂ ಓದಿ: ಕತಾರ್‌ : ಕತಾರಿನಲ್ಲಿ ಸುಪ್ರಸಿದ್ಧ ನಟಿ ಶ್ರೀಮತಿ ಸುಮಲತಾ ಅಂಬರೀಶ್ ಹಾಗೂ

ಈ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ಮಧ್ಯರಾತ್ರಿಯಿಂದ ವಿಜಯಪುರ ಜಿಲ್ಲೆಯಲ್ಲಿ ನಾಳೆ ರಾತ್ರಿಯವರೆಗೂ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಟಿ. ಭೂಬಾಲನ್‌ ಅವರು ಆದೇಶ ಹೊರಡಿಸಿದ್ದಾರೆ.

ನಾಳೆ ಜಿಲ್ಲೆಯಲ್ಲಿ ಸರಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದ್ದು, ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *