Tue. Jan 7th, 2025

LOVE JIHAD: ಹಿಂದೂ ಹೆಸರನ್ನಿಟ್ಟುಕೊಂಡು ಯುವತಿ ಜೊತೆ ಕಾಮದಾಟ – ದೈಹಿಕ ಸಂಪರ್ಕ ಬೆಳೆಸಿದ ವಿಡಿಯೋ ತೋರಿಸಿ ಯುವತಿಗೆ ಬ್ಲ್ಯಾಕ್‌ ಮೇಲ್!!! – ಆಮೇಲೆ ಆಗಿದ್ದೇನು?!

LOVE JIHAD:(ಡಿ.30) ದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಹಿಂದೂ ಹೆಸರನ್ನಿಟ್ಟುಕೊಂಡು ಸ್ನೇಹಗಳಿಸಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ. ಹಿಂದೂ ಹೆಣ್ಣುಮಕ್ಕಳನ್ನು ದೈಹಿಕ ಶೋಷಣೆ ಮಾಡುತ್ತಿದ್ದಾರೆ. ಪ್ರದೀಪ್ ಸೋಲಂಕಿ ಎಂದು ಹೇಳಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದು ಮಾತ್ರವಲ್ಲದೆ ವಿಡಿಯೋ ಸೆರೆಹಿಡಿದು ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದಿದೆ.

ಇದನ್ನೂ ಓದಿ: ಉಳ್ಳಾಲ: ಸಹೋದರನ ಪುತ್ರಿಯನ್ನು ರಕ್ಷಿಸಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ .!!

ಮೊಹ್ಸಿನ್ ಎಂಬ ಮುಸ್ಲಿಂ ಯುವಕ ತನ್ನ ಹೆಸರನ್ನು ಪ್ರದೀಪ್ ಎಂದು ಹೇಳಿಕೊಂಡು ಹಿಂದೂ ಯುವತಿಗೆ ವಂಚಿಸಿದ್ದಾನೆ. ಪ್ರದೀಪ್ ಸೋಲಂಕಿ ಎಂದು ಹೇಳಿಕೊಂಡು ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಾನೆ. ಆರೋಪಿ ಮೂರು ವರ್ಷಗಳಿಂದ ತನ್ನ ಹೆಸರನ್ನು ಬದಲಾಯಿಸಿಕೊಂಡು ಲೈಂಗಿಕವಾಗಿ ಶೋಷಿಸುತ್ತಿದ್ದ. ಸಂತ್ರಸ್ತೆ ಕುಟುಂಬ ಸಮೇತ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತೆಯ ಸುನೀತಾ ಜಮ್ರೆಯ ಮೂಲಕ ಮೊಹ್ಸಿನ್ ಮುಲ್ತಾನಿ ಎಂಬಾತನ ಪರಿಚಯವಾಗಿದೆ. ಗೆಳತಿ ಆತನನ್ನು ಹಿಂದೂ ಹುಡುಗ ಎಂದು ಕರೆದು ವಂಚಿಸಿದ್ದಾರೆ. ಸ್ನೇಹಿತರಾದ ನಂತರ, ಮೊಹ್ಸಿನ್ ದೈಹಿಕ ಸಂಪರ್ಕ ಬೆಳೆಸಿ ವೀಡಿಯೊ ಸೆರೆಹಿಡಿದು ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ವೀಡಿಯೊವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಮದುವೆಯಾಗುವಂತೆ ಒತ್ತಾಯಿಸಿದ್ದಾಗಿ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರದೀಪ್ ಅಲಿಯಾಸ್ ಮೊಹ್ಸಿನ್ ತನ್ನನ್ನು ಖಾರ್ಗೋನ್ ಜಿಲ್ಲೆಯ ಕಾಸ್ರವಾಡ ನಿವಾಸಿ ಎಂದು ಹೇಳಿಕೊಂಡಿದ್ದಾನೆ. ನಿಜವಾಗಿ ಆತ ಧಾರ್ ಜಿಲ್ಲೆಯ ಮನವಾರ್ ನಿವಾಸಿಯಾಗಿದ್ದಾನೆ. ಸಂತ್ರಸ್ತೆಯ ಕುಟುಂಬಕ್ಕೆ ಈ ವಿಷಯ ತಿಳಿದ ನಂತರ ಸಂತ್ರಸ್ತೆ ತನ್ನ ಕುಟುಂಬದೊಂದಿಗೆ ಕೊತ್ವಾಲಿ ಪೊಲೀಸ್ ಠಾಣೆಗೆ ಬಂದು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ವಿಷಯ ತಿಳಿದ ಹಿಂದೂ ಸಂಘಟನೆಗಳು ಕೂಡ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಶಿವಸೇನೆ ಹಾಗೂ ಇತರ ಹಿಂದೂ ಸಂಘಟನೆಗಳ ಸದಸ್ಯರು ಕೊತ್ವಾಲಿ ಠಾಣೆಗೆ ಆಗಮಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಿಂದೂ ಸಂಘಟನೆಗಳ ಸದಸ್ಯರು ಒತ್ತಾಯಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *