Pratap Simha:(ಡಿ.30) ಕೆಲವು ದಿನಗಳಿಂದ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಸದ್ಯ ಈ ಕುರಿತು ಪ್ರತಾಪ್ ಸಿಂಹ ಅವರೇ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಪುತ್ತೂರು: ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ವತಿಯಿಂದ “ವೀರ ಬಾಲ ದಿವಸ್” ಕಾರ್ಯಕ್ರಮ
ನಗರದ ಪ್ರಮುಖ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈ ನಡುವೆ ಬಿಜೆಪಿಯಲ್ಲೇ ಇದಕ್ಕೆ ಭಿನ್ನರಾಗ ಕೇಳಿಬಂದಿದೆ. ಹಲವು ಬಿಜೆಪಿ ನಾಯಕರು ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಮಾಜಿ ಸಂಸದ ಪ್ರತಾಪ್ ಸಿಂಹ ಮಾತ್ರ ಸಿದ್ದರಾಮಯ್ಯ ಅವರ ಹೆಸರಿಟ್ಟರೆ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಸಿಎಂ ಪರ ಬ್ಯಾಟ್ ಬೀಸಿದ್ದರು. ಇದಕ್ಕೆ ಪ್ರತಾಪ್ ಸಿಂಹ ವಿರುದ್ಧ ಸಂಸದ ಯದುವೀರ್ ಸೇರಿ ಹಲವರು ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬೆನ್ನಲ್ಲೇ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಬನಂತಿ ಸಾಕಷ್ಟು ಸದ್ದು ಮಾಡುತ್ತಿದೆ.



ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ಅವರು, ಈ ತರ ಊಹಾಪೋಹಗಳನ್ನು ಮಾಡುವವರಿಗೆ ನಾನು ಒಂದು ಮಾತು ಹೇಳುತ್ತೇನೆ, ಪ್ರತಾಪ್ ಸಿಂಹ ಕಾಂಗ್ರೆಸ್ಸಿಗೆ ಹೋಗಬೇಕಾದ ಅನಿವಾರ್ಯತೆ ಇಲ್ಲ ಎಂದರು.

ನನ್ನ ತಂದೆಯೂ ಜನಸಂಘದವರು, ಪ್ರತಾಪ್ ಸಿಂಹ ಕೂಡ ಎಂದಿಗೂ ಬಿಜೆಪಿಯಲ್ಲಿಯೇ ಇರುತ್ತಾನೆ. ನಮ್ಮದು ಸೈದ್ಧಾಂತಿಕ ಬದ್ಧತೆ ಇರುವ ಪಕ್ಷ. ಕಾಂಗ್ರೆಸ್ಗೆ ಹೋಗಬೇಕು ಎಂದಿದ್ದರೆ ಚುನಾವಣೆ ಸಂದರ್ಭದಲ್ಲಿಯೇ ಹೋಗಬಹುದಿತ್ತಲ್ಲವೇ? ಆ ಪಕ್ಷದಿಂದ ಯಾರ್ಯಾರು ನನಗೆ ಫೋನ್ ಮಾಡಿ ನನಗೆ ಟಿಕೆಟ್ ಆಫರ್ ಮಾಡಿದ್ದರು ಅವರ ಬಳಿ ಕೇಳಿ ನೋಡಿ. ಹೋಗುವುದಿದ್ದರೆ ಆಗಲೇ ಹೋಗುತ್ತಿದ್ದೆ ಎಂದರು.
