ಪುತ್ತೂರು:(ಡಿ.30) ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ಘಟನೆ ಮುಡೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ: ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ
ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರುವರೆ ವರ್ಷದ ಪುತ್ರ ಝುನು ಮೃತ ಮಗು.
ಏನಿದು ಘಟನೆ?
ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಮಗುವನ್ನು ರಕ್ಷಿಸಲು ಹೋದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.