ಉಡುಪಿ:(ಡಿ.30) ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ನೇಣು ಕುಣಿಕೆ ತುಂಡಾಗಿ ವ್ಯಕ್ತಿ ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.


ಇದನ್ನೂ ಓದಿ: Prathap Simha: ಪ್ರತಾಪ್ ಸಿಂಹ ಕಾಂಗ್ರೆಸ್ ಸೇರ್ಪಡೆ!?
ಮಣಿಪಾಲದ ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ಘಟನೆ ಸಂಭವಿಸಿದ್ದು, ಮೆಲ್ರಾಯ್( 55) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ.
ಮನೆಯ ಮೊದಲ ಮಹಡಿಯ ಮೇಲ್ಟಾವಣಿಗೆ ನೇಣು ಬಿಗಿದು ಮೆಲ್ರಾಯ್ ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಈ ವೇಳೆ ಹಗ್ಗ ತುಂಡಾದ ಕಾರಣ ಮೆಲ್ರಾಯ್ ನೆಲಕ್ಕೆ ಬಿದ್ದಿದ್ದಾರೆ.



ಇಪ್ಪತ್ತು ಅಡಿಗೂ ಹೆಚ್ಚು ಎತ್ತರದಿಂದ ಬಿದ್ದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಗಾಯಗಳಾದ್ದು ಮೆಲ್ರಾಯ್
ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
