Wed. Jan 8th, 2025

Ullal: ಸಹೋದರನ ಪುತ್ರಿಯನ್ನು ರಕ್ಷಿಸಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ .!! – ಅಷ್ಟಕ್ಕೂ ಆಗಿದ್ದೇನು?

ಉಳ್ಳಾಲ :(ಡಿ.30) ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.29 ಆದಿತ್ಯವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

ಇದನ್ನೂ ಓದಿ: ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ಶಿವಾಜಿನಗರದ ಹೆಚ್.ಪಿ.ಕೆ ರೋಡ್ ನಿವಾಸಿ ಕೆ.ಎಮ್. ಸಜ್ಜದ್ ಆಲಿ (45) ಸಮುದ್ರಪಾಲಾದವರು.

ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿದ್ದರು.

ನೀರಿನಲ್ಲಿ ಮುಳುಗಿ ವಾಪಸ್ಸು ದಡಕ್ಕೆ ಬಂದವರನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಅವರು ಪಡೀಲ್ ನಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ 11 ಮಂದಿ ಕುಟುಂಬಿಕರು ಸೋಮೇಶ್ವರ ಸಮುದ್ರ ತೀರದಲ್ಲಿ ವಿಹಾರಕ್ಕೆಂದು ಆಗಮಿಸಿದ್ದರು.

Leave a Reply

Your email address will not be published. Required fields are marked *