Tue. Jan 7th, 2025

Ujire: ಜ.1 ರಿಂದ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಉಚಿತ ಸೇವೆ ಆರಂಭ

ಉಜಿರೆ:(ಡಿ.31) ಜ.1ರಿಂದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.1ರಿಂದ ಡಯಾಲಿಸಿಸ್ ಉಚಿತ ಸೇವೆ ಪ್ರಾರಂಭಗೊಳ್ಳಲಿದೆ.

ಇದನ್ನೂ ಓದಿ: ಉಜಿರೆ: ಕಾರಿಗೆ ಡಿಕ್ಕಿ ಹೊಡೆದ ಟಿಪ್ಪರ್‌


ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಲಕ್ಷಾಂತರ ಬಡವರ ಬಾಳಿಗೆ ಬೆಳಕು ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಲಕ್ಷ ದೀಪೋತ್ಸವದ ಸಂದರ್ಭ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಜ.1ರಿಂದ ಉಜಿರೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಉಚಿತ ಸೇವೆಯನ್ನು ನೀಡುವುದಾಗಿ ಘೋಷಿಸಿದ್ದರು.

ಬೆಳ್ತಂಗಡಿ ತಾಲೂಕಿನಲ್ಲಿ ಅನೇಕ ಮಂದಿ ಡಯಾಲಿಸಿಸ್ ಸೇವೆಯನ್ನು ಬೇರೆ ಬೇರೆ ಕಡೆಯಲ್ಲಿ ಪಡೆಯುತ್ತಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿ ಸೀಮಿತ ಜನರಿಗೆ ಮಾತ್ರ ಅವಕಾಶ ಇರುವುದರಿಂದ ಬೆಳ್ತಂಗಡಿ ತಾಲೂಕಿನ ಅನೇಕರು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಹೋಗುವ ಪರಿಸ್ಥಿತಿ ಇದೆ. ಧರ್ಮಸ್ಥಳದ ಧರ್ಮಾಧಿಕಾರಿಗಳ ಈ ಮಾನವೀಯ ಸೇವೆ ತಾಲೂಕಿನ ಅನೇಕರಿಗೆ ಅನುಕೂಲ ಕಲ್ಪಿಸಲಿದೆ.

Leave a Reply

Your email address will not be published. Required fields are marked *