Wed. Jan 8th, 2025

Bandaru : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

ಬಂದಾರು :(ಜ.2) ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ ಜ.02 ರಂದು ನಡೆಯಿತು.

ಇದನ್ನೂ ಓದಿ; ಬೆಳ್ತಂಗಡಿ: ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ!!

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಸೀತಾರಾಮ ಶೆಟ್ಟಿ ಕೆಂಬರ್ಜೆ, ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ ನಾಯಕ್, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು,

ಅಧ್ಯಕ್ಷರಾದ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ, ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ, ಅರ್ಚಕರಾದ ಅನಂತರಾಮ ಶಬರಾಯ,

ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ, ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷರಾದ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ, ಗಿರೀಶ್ ಗೌಡ ನಡ ಸಾಹಿತ್ಯ, ಸ್ವಾತಿ ಗೌಡ ನಡ ಗಾಯನ, ನಿತಿನ್ ಕೋಟ್ಯಾನ್ ಉಜಿರೆ, ಪ್ರಚಾರ ಕಲೆ

ಮತ್ತು ಸಂಕಲನ, ದಿನೇಶ್ ಗೌಡ ಅಡ್ಡಾರು ಸಹಕಾರದಲ್ಲಿ ಆಡಿಯೋ ಮೂಡಿಬಂದಿರುತ್ತದೆ. ಆಡಳಿತ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು.


ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *