ವಿಟ್ಲ:(ಜ.2 )ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲದ ಮುಳಿಯ ತಾಳಿಪಡ್ಪು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45 ವ.) ಆತ್ಮಹತ್ಯೆ ಮಾಡಿಕೊಂಡವರು.
ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು. ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.