Wed. Jan 8th, 2025

Belthangady: ಜ. 7 ರಂದು ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಭಕ್ತರಿಗಾಗಿ ನಿರ್ಮಿಸಿದ “ಶ್ರೀ ಸಾನ್ನಿಧ್ಯ” ಉದ್ಘಾಟನೆ ಹಾಗೂ 2024 – 25ರ ಜ್ಞಾನದೀಪ ಕಾರ್ಯಕ್ರಮದ ಶುಭಾರಂಭ – ಉದ್ಘಾಟನೆಗೆ ಆಗಮಿಸಲಿದ್ದಾರೆ ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನ್ ಕರ್

ಬೆಳ್ತಂಗಡಿ:(ಜ.3) ಧರ್ಮಸ್ಥಳ ಶ್ರೀ ಮಂಜುನಾಥ ದೇವರ ದರ್ಶನ ಪಡೆಯಲು ಸಹಸ್ರಾರು ಭಕ್ತರು ಆಗಮಿಸುತ್ತಾರೆ. ಹಗಲು ರಾತ್ರಿ ಎನ್ನದೇ ದೇವರ ದರ್ಶನ ಭಾಗ್ಯಕ್ಕಾಗಿ ಕಾಯುತ್ತಿರುತ್ತಾರೆ.

ಇದನ್ನೂ ಓದಿ: ಬೆಳ್ತಂಗಡಿ : ಮುಗ್ರೋಡಿ ಕನ್ಸ್ಟ್ರಕ್ಷನ್ ಗೆ ಕಳ್ಳರ ಕಾಟ

ಆದರೆ ಇನ್ನು ಧರ್ಮಸ್ಥಳ ಶ್ರೀ ಮಂಜುನಾಥ ದೇವರ ದರ್ಶನ ಪಡೆಯಲು ಕಷ್ಟ ಪಡಬೇಕಾದ ಅವಶ್ಯಕತೆ ಇಲ್ಲ. ಭಕ್ತರಿಗಾಗಿಯೇ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸುಸಜ್ಜಿತ ಸೌಕರ್ಯಗಳೊಂದಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಗಳನ್ನೊಳಗೊಂಡ ನೂತನ ಸಂಕೀರ್ಣ ‘ಶ್ರೀ ಸಾನ್ನಿಧ್ಯ’ ಉದ್ಘಾಟನೆ ಮತ್ತು 2024 – 25ರ ಜ್ಞಾನದೀಪ ಕಾರ್ಯಕ್ರಮದ ಶುಭಾರಂಭ ನಡೆಯಲಿದೆ.

ಇದೇ ಜ. 7 ರಂದು ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟಕರಾಗಿ ಘನವೆತ್ತ ಭಾರತದ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್ ಕರ್ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಾ. (ಶ್ರೀಮತಿ) ಸುದೇಶ್ ಧನ್ ಕರ್, ಗೌರವ ಉಪಸ್ಥಿತಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷರಾದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ,

ದಕ್ಷಿಣ ಕನ್ನಡದ ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿಯ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ರವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *