ಕಿನ್ನಿಗೋಳಿ:(ಜ.3) ಚಲಿಸುತ್ತಿದ್ದ ಆಟೋ ಒಂದಕ್ಕೆ ನಾಯಿ ಅಡ್ದ ಬಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಿನ್ನಿಗೋಳಿಯ ರಾಜರತ್ನಾಪುರದಲ್ಲಿ ನಡೆದಿದೆ.
ಇದನ್ನೂ ಓದಿ: ಮಂಗಳೂರು: ಮಂಗಳೂರು ವಿ. ವಿ. ವಿದ್ಯಾರ್ಥಿ ಸಂಘದ ಚುನಾವಣೆ
ಗಾಯಗೊಂಡ ಆಟೋ ಚಾಲಕನನ್ನು ಕಟೀಲು ಮಲ್ಲಿಗೆಯಂಗಡಿ ಬಳಿಯ ನಿವಾಸಿ ಕಟೀಲು ಮೇಳದ ಕಲಾವಿದ ಆನಂದ್ ಎಂದು ಗುರುತಿಸಲಾಗಿದೆ.
ಗಾಯಾಳು ಆನಂದ್ ಆಟೋದಲ್ಲಿ ಕಿನ್ನಿಗೋಳಿಯಿಂದ ಕಟೀಲು ಕಡೆಗೆ ಹೋಗುತ್ತಿದ್ದು ರಾಜರತ್ನಾಪುರ ಬಳಿ ನಾಯಿ ಅಡ್ಡ ಬಂದಿದೆ. ಈ ಸಂದರ್ಭ ನಾಯಿ ಜೊತೆ ಅಪಘಾತ ತಪ್ಪಿಸಲು ಆಟೋ ಚಾಲಕ ಯತ್ನ ನಡೆಸಿದಾಗ ಆಟೋ ಪಲ್ಟಿಯಾಗಿದ್ದು,
ಸಮೀಪದ ಪೊದೆಯೊಳಗೆ ಆಟೋ ಬಿದ್ದಿದೆ. ಆಟೋ ಪಲ್ಟಿಯಾದ ರಭಸಕ್ಕೆ ,ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಿಂದ ಆಟೋಗೆ ಸಂಪೂರ್ಣ ಹಾನಿಯಾಗಿದೆ.