ಮಂಗಳೂರು:(ಜ.3) 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲಿತ ಅಭ್ಯರ್ಥಿಗಳು ಆರಕ್ಕೆ ಆರೂ ಸ್ಥಾನದಲ್ಲಿ ಗೆಲ್ಲುವ ಮೂಲಕ ಸತತ 11ನೇ ಬಾರಿಗೆ
ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಬಿವಿಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿ ಮದನ್, ಉಪಾಧ್ಯಕ್ಷರಾಗಿ ಪಾವನ, ಕಾರ್ಯದರ್ಶಿಯಾಗಿ ಕಾರ್ತಿಕ್, ಸಹಕಾರ್ಯದರ್ಶಿಯಾಗಿ ಮಹೇಶ್,
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಮ್ ಪ್ರಸಾದ್ ಹಾಗೂ ಸಹ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೀರಾಜ್ ನೇಮಕಗೊಂಡಿದ್ದಾರೆ.