Wed. Jan 8th, 2025

Mangaluru : ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಶ್ಯೂರಿಟಿ ನೀಡುತ್ತಿದ್ದ ಆರೋಪಿ ಅಂದರ್!!

ಮಂಗಳೂರು:(ಜ.3) ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚನೆ ಮಾಡಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಹಾಸನ: ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಕಾಪು ಕಳತ್ತೂರಿನ ಕೆ. ಉಮ್ಮರಬ್ಬ ಮೊಯಿದೀನ್(63) ಬಂಧಿತ ಆರೋಪಿ. ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ

ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚನೆ ಮಾಡುತ್ತಿದ್ದ, ಅಂತೆಯೇ ಈತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಪ್ರಕರಣ ದಾಖಲಾಗಿತ್ತು.

ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ನೇತೃತ್ಬದಲ್ಲಿ ಠಾಣಾ ಪಿ ಎಸ್ ಐ ಹಾಗೂ ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *