ತುಮಕೂರು :(ಜ.3) ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿದೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದಿದೆ.
ಇದನ್ನೂ ಓದಿ: ಮಂಗಳೂರು: ಮಂಗಳೂರು ವಿ. ವಿ. ವಿದ್ಯಾರ್ಥಿ ಸಂಘದ ಚುನಾವಣೆ
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ.
ಮಹಿಳೆ ಜೊತೆ ಡಿವೈಎಸ್‌ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಇದೀಗ ಅಧಿಕಾರಿಯ ರಾಸಲೀಲೆಯ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.